ADVERTISEMENT

ಮೈಸೂರು | 12 ನಕಲಿ ಕ್ಲಿನಿಕ್‌ಗಳಿಗೆ ಬೀಗ: 16 ಆಸ್ಪತ್ರೆಗಳಿಗೆ ದಂಡ

​ಪ್ರಜಾವಾಣಿ ವಾರ್ತೆ
Published 16 ಜುಲೈ 2025, 3:13 IST
Last Updated 16 ಜುಲೈ 2025, 3:13 IST
<div class="paragraphs"><p>ಪ್ರಾತಿನಿಧಿಕ ಚಿತ್ರ</p></div>

ಪ್ರಾತಿನಿಧಿಕ ಚಿತ್ರ

   

ಮೈಸೂರು: ಜಿಲ್ಲೆಯಾದ್ಯಂತ ಅನಧಿಕೃತವಾಗಿ ನಡೆಯುತ್ತಿರುವ ಕ್ಲಿನಿಕ್ ಮತ್ತು ಆಸ್ಪತ್ರೆಗಳ ವಿರುದ್ಧ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಾರ್ಯಾಚರಣೆ ನಡೆಸಿದ್ದು, 12 ನಕಲಿ ಕ್ಲಿನಿಕ್‌ಗಳಿಗೆ ಬೀಗ ಜಡಿದಿದೆ. 16 ಆಸ್ಪತ್ರೆಗಳಿಗೆ ₹8 ಲಕ್ಷ ದಂಡ ವಿಧಿಸಿದೆ.

ನೋಂದಣಿಯಾಗದೆ ನಡೆಸುತ್ತಿದ್ದ 12 ನಕಲಿ ಕ್ಲಿನಿಕ್‌ಗಳನ್ನು ಪತ್ತೆ ಹಚ್ಚಿದ ಅಧಿಕಾರಿಗಳು, ಇವುಗಳಿಗೆ 8 ಕ್ಲಿನಿಕ್‌ಗಳಿಗೆ ಸ್ಥಳದಲ್ಲೇ ಬೀಗಮುದ್ರೆ ಹಾಕಿಸಿದ್ದಾರೆ. ಆರ್ಯುವೇದಿಕ್ ವೈದ್ಯರಿಬ್ಬರು ಅಲೋಪತಿ ಚಿಕಿತ್ಸೆ ನೀಡುವ ಬಗ್ಗೆ ಸಿಕ್ಕ ಮಾಹಿತಿ ಮೇರೆಗೆ ಎರಡು ಆಯುರ್ವೇದಿಕ್ ಕ್ಲಿನಿಕ್ ಮುಚ್ಚಿಸಲಾಗಿದ್ದು, ಆಯುಷ್ ಇಲಾಖೆಗೆ ದೂರು ನೀಡಲಾಗಿದೆ. ಇನ್ನೂ ಇಬ್ಬರು ನಕಲಿ ವೈದ್ಯರ ವಿರುದ್ಧ ದೂರು ನೀಡಿದ್ದು, ಹೈಕೋರ್ಟ್‌ನಲ್ಲಿ ವಿಚಾರಣೆ ನಡೆಯುತ್ತಿದೆ.

ADVERTISEMENT

16 ಆಸ್ಪತ್ರೆಗೆ ದಂಡ: ದುಬಾರಿ ವೈದ್ಯಕೀಯ ಶುಲ್ಕ ವಸೂಲಿ ಆರೋಪದ ಮೇಲೆ ಆಸ್ಪತ್ರೆಗಳ ಮಾಲೀಕರಿಗೆ ತಲಾ ₹50 ಸಾವಿರದಿಂದ ₹1 ಲಕ್ಷದವರೆಗೆ ದಂಡ ವಿಧಿಸಲಾಗಿದೆ.

ಕೆಪಿಎಂಇಎ ಕಾಯ್ದೆಯಡಿ ನೋಂದಣಿಯಾಗದೆ ಕೆಲ ಆಸ್ಪತ್ರೆ ಮತ್ತು ಕ್ಲಿನಿಕ್‌ಗಳು ಕಾರ್ಯ ನಿರ್ವಹಿಸುತ್ತಿರುವ ಬಗ್ಗೆ ದೂರು ಕೇಳಿಬಂದಿತ್ತು. ಜು. 9ರಂದು ಕೆಪಿಎಂಇಎ ಪ್ರಾಧಿಕಾರದ ಸಭೆ ನಡೆಸಿದ ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ ನಕಲಿ ಆಸ್ಪತ್ರೆ ಮತ್ತು ವೈದ್ಯರ ವಿರುದ್ಧ ಕ್ರಮಕ್ಕೆ ಸೂಚಿಸಿದ್ದರು. ಈ ಹಿನ್ನೆಲೆಯಲ್ಲಿ ಮೈಸೂರು ನಗರ ಸೇರಿದಂತೆ ಜಿಲ್ಲೆಯಾದ್ಯಂತ ಆಯಾ ತಾಲ್ಲೂಕು ಆರೋಗ್ಯಾಧಿಕಾರಿಗಳ ನೇತೃತ್ವದಲ್ಲಿ ನಿರಂತರವಾಗಿ ತಪಾಸಣೆ ಕಾರ್ಯ ನಡೆದಿದೆ ಎಂದು ಎಂದು ಜಿಲ್ಲಾ ನೋಡಲ್ ಅಧಿಕಾರಿ ಡಾ.ಗೋಪಿನಾಥ್ ಮಾಹಿತಿ ನೀಡಿದರು.

ಕಳೆದ ಆರು ತಿಂಗಳಲ್ಲಿ 28 ಆಸ್ಪತ್ರೆ ಮತ್ತು ಕ್ಲಿನಿಕ್‌ಗಳ ವಿರುದ್ಧ ಕಾರ್ಯಾಚರಣೆ ನಡೆಸಿ ದಂಡ ವಿಧಿಸಲಾಗಿದೆ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.