ADVERTISEMENT

ನಕಲಿ ಚಿನ್ನ: ಮೂವರ ಬಂಧನ

​ಪ್ರಜಾವಾಣಿ ವಾರ್ತೆ
Published 2 ಮಾರ್ಚ್ 2020, 13:52 IST
Last Updated 2 ಮಾರ್ಚ್ 2020, 13:52 IST

ಬೆಟ್ಟದಪುರ: ಪಟ್ಟಣದ ವಿವಿಧ ಗಿರವಿ ಅಂಗಡಿಗಳಲ್ಲಿ ನಕಲಿ ಚಿನ್ನದ ಉಂಗುರ ಅಡವಿಟ್ಟು ವಂಚಿಸಿದ್ದ ಮೂವರು ಆರೋಪಿಗಳನ್ನು ಬೆಟ್ಟದಪುರ ಪೊಲೀಸರು ಬಂಧಿಸಿದ್ದಾರೆ.

ತಮಿಳುನಾಡಿನ ಹೊಸೂರಿನ ಚಂದ್ರಶೇಖರ್ (40), ಹಾಸನ ಜಿಲ್ಲೆಯ ಹೊಳೆನರಸೀಪುರದ ಎಂ.ಜೆ.ಲೋಕೇಶ್‌ (55), ರತ್ನಾ (45) ಬಂಧಿತರು.

ಬಂಧಿತ ಆರೋಪಿಗಳಿಂದ ₹ 28,390 ನಗದು, ನಕಲಿ ಚಿನ್ನದ ಉಂಗುರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಬೆಟ್ಟದಪುರ ಪೊಲೀಸರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.