ADVERTISEMENT

ನಕಲಿ ನಂದಿನಿ ತುಪ್ಪ ತಯಾರಿಕೆ ಪ್ರಕರಣ: ಸಿಬಿಐ ತನಿಖೆಗೆ ಒತ್ತಾಯಿಸಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 30 ಡಿಸೆಂಬರ್ 2021, 7:55 IST
Last Updated 30 ಡಿಸೆಂಬರ್ 2021, 7:55 IST
ಪ್ರತಿಭಟನೆಯ ಸಂದರ್ಭ
ಪ್ರತಿಭಟನೆಯ ಸಂದರ್ಭ   

ಮೈಸೂರು: ನಕಲಿ ನಂದಿನಿತುಪ್ಪ ತಯಾರಿಕೆಪ್ರಕರಣದ ತನಿಖೆಯನ್ನು ಸಿಬಿಐಗೆ ಒಪ್ಪಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತಸಂಘದ ಕಾರ್ಯಕರ್ತರು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಎದುರು ಗುರುವಾರ ಪ್ರತಿಭಟನೆ ನಡೆಸಿದರು.

ನಂದಿನಿ ಹಾಲು ಮತ್ತು ಉಪ ಉತ್ಪನ್ನಗಳ ವಿಶ್ವಾಸಾರ್ಹತೆಗೆ ಈ ಪ್ರಕರಣದಿಂದ ಧಕ್ಕೆಯಾಗಿದೆ. ಇದು ರೈತರ ಮೇಲೂ ಪರಿಣಾಮ ಬೀರಲಿದೆ. ಹಾಗಾಗಿ ಪ್ರಕರಣದ ತನಿಖೆಯನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಒತ್ತಾಯಿಸಿದರು.

ಹಾಲು ಉತ್ಪಾದಕರ ಸಹಕಾರ ಸಂಘಗಳು ನಡೆಸುವ ಹಾಲು ಮಾರಾಟವನ್ನು ಮೈಮುಲ್ ನಿಷೇಧಿಸಿರುವುದು ಸರಿಯಲ್ಲ ಎಂದು ಖಂಡಿಸಿದ ಅವರು, ಇದರಿಂದ ಸಂಘಗಳು ಭಾರಿ ನಷ್ಟಕ್ಕೆ ತುತ್ತಾಗಲಿವೆ. ಹಾಗಾಗಿ ಹಾಲು ಮಾರಾಟಕ್ಕೆ ಅವಕಾಶ ನೀಡಬೇಕು ಎಂದು ಆಗ್ರಹಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.