ADVERTISEMENT

ಪಿರಿಯಾಪಟ್ಟಣ | ಸಾಲ ಬಾಧೆ: ರೈತ ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 5 ಮೇ 2025, 15:47 IST
Last Updated 5 ಮೇ 2025, 15:47 IST
ಪರಮೇಶ
ಪರಮೇಶ   

ಪಿರಿಯಾಪಟ್ಟಣ: ತಾಲ್ಲೂಕಿನ ದಿಂಡಗಾಡಿನಲ್ಲಿ ಸಾಲ ಬಾಧೆ ತಾಳಲಾರದೆ ರೈತ ಪರಮೇಶ (49) ಸೋಮವಾರ ಜಮೀನಿನಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ವ್ಯವಸಾಯಕ್ಕಾಗಿ ಖಾಸಗಿ ಬ್ಯಾಂಕ್‌ನಲ್ಲಿ ಟ್ರ್ಯಾಕ್ಟರ್ ಸಾಲ, ಶುಂಠಿ ಬೆಳೆಗೆ ಕೈ ಸಾಲ ಹಾಗೂ ಕೊಪ್ಪ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ₹ 3 ಲಕ್ಷ ಸಾಲ ಮಾಡಿದ್ದರು. ಶುಂಠಿ ಬೆಳೆ ಕೈ ಕೊಟ್ಟ ಕಾರಣ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ.

ಬೈಲಕುಪ್ಪೆ ಪೊಲೀಸ್ ಠಾಣೆಗೆ ಮೃತರ ಪತ್ನಿ ರೇಖಾ ದೂರು ನೀಡಿದ್ದು, ಪಿಎಸ್ಐ ರವಿಕುಮಾರ್ ಪ್ರಕರಣ ದಾಖಲಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.