ADVERTISEMENT

ಪಿರಿಯಾಪಟ್ಟಣ: ಬೆಳೆ ವಿಫಲ ರೈತ ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 17 ಮೇ 2025, 13:10 IST
Last Updated 17 ಮೇ 2025, 13:10 IST
ರಾಮೇಗೌಡ
ರಾಮೇಗೌಡ   

ಪಿರಿಯಾಪಟ್ಟಣ: ತಾಲ್ಲೂಕಿನ ಹಬಟೂರು ಗ್ರಾಮದಲ್ಲಿ ರೈತ ರಾಮೇಗೌಡ (62) ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 

‘ಜಮೀನಿನಲ್ಲಿ ವಿಷ ಸೇವಿಸಿದ್ದ  ಇವರನ್ನು ಪಿರಿಯಾಪಟ್ಟಣ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಪಡೆದು ಮೈಸೂರಿನ ಕೆ.ಆರ್ ಆಸ್ಪತ್ರೆಯಲ್ಲಿ 4 ದಿನಗಳಿಂದ ಚಿಕಿತ್ಸೆಯಲ್ಲಿದ್ದರು. ಬ್ಯಾಂಕ್ ಹಾಗೂ ಕೈಸಾಲ ಸೇರಿದಂತೆ ಒಟ್ಟು ₹15 ಲಕ್ಷ ಸಾಲ ಮಾಡಿಕೊಂಡಿದ್ದು,  ಮೂರು- ವರ್ಷಗಳಿಂದ ತನ್ನ ಜಮೀನಿನಲ್ಲಿ ಬೆಳೆದ ಬೆಳೆ ಹಾನಿಯಾಗಿತ್ತು. ಸಾಲ ಬಾಧೆಯಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ’ ಎಂದು ಮೃತರ ಸಂಬಂಧಿಕರು ಇಲ್ಲಿನ ಪೋಲಿಸ್ ಠಾಣೆಯಲ್ಲಿ ದೂರು ನೀಡಿದ್ದಾರೆ, ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT