
ತಿ.ನರಸೀಪುರ: ವಿಶ್ವ ರೈತ ದಿನಾಚರಣೆ, ರೈತ ಹಬ್ಬ ಪ್ರಯುಕ್ತ ಡಿ.23ರಂದು ಕಲಬುರಗಿಯಲ್ಲಿ ನಡೆಯಲಿರುವ ರಾಜ್ಯಮಟ್ಟದ ರೈತ ಸಮಾವೇಶದ ಪೋಸ್ಟರ್‌ಗಳನ್ನು ಬನ್ನೂರು ಗ್ರಾಮಾಂತರ ಘಟಕದ ಮುಖಂಡರು ಬನ್ನೂರು ಪಟ್ಟಣದ ಸಂತೆಮಾಳದಲ್ಲಿ ಈಚೆಗೆ ಬಿಡುಗಡೆ ಮಾಡಿದರು.
ರಾಜ್ಯ ಸಂಘಟನಾ ಕಾರ್ಯದರ್ಶಿ ಅತ್ತಹಳ್ಳಿ ದೇವರಾಜ್ ಮಾತನಾಡಿ, ‘ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಹಾಗೂ ರಾಜ್ಯ ಕಬ್ಬು ಬೆಳೆಗಾರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ಕಲಬುರಗಿಯ ಎಂ.ಎಸ್.ಪಂಡಿತ್ ರಂಗಮಂದಿರದಲ್ಲಿ ಬೆಳಿಗ್ಗೆ 11ಕ್ಕೆ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಪ್ರಗತಿಪರ ಚಿಂತಕರು, ರೈತ ಸಂಘಟನೆಗಳ ಮುಖಂಡರುಗಳು ಒಗ್ಗೂಡಿ ಚರ್ಚಿಸುವರು. ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ರಾಜ್ಯ–ಕೇಂದ್ರ ಸರ್ಕಾರಕ್ಕೆ ಒತ್ತಾಯ ಪತ್ರವನ್ನೂ ಸಲ್ಲಿಸಲಿದ್ದೇವೆ’ ಎಂದು ತಿಳಿಸಿದರು.
ಕೃಷಿಯಲ್ಲಿ ಸಾಧನೆ ಮಾಡಿದ ರೈತರಿಗೆ ಐಎಎಸ್ ಪ್ರಶಸ್ತಿ ನೀಡಿ ಸನ್ಮಾನಿಸಲಾಗುವುದು. ತಾಲ್ಲೂಕಿನಿಂದ ಹೆಚ್ಚಿನ ಸಂಖ್ಯೆಯ ರೈತರು ಸಮಾವೇಶದಲ್ಲಿ ಭಾಗವಹಿಸಿ ಯಶಸ್ವಿಗೊಳಿಸುವಂತೆ ಅವರು ಮನವಿ ಮಾಡಿದರು.
ಸಂಘದ ತಾಲ್ಲೂಕು ಉಪಾಧ್ಯಕ್ಷ ಹೆಗ್ಗೂರು ರಂಗರಾಜು, ಬನ್ನೂರು ಗ್ರಾಮಾಂತರ ಘಟಕದ ಮುಖಂಡರಾದ ಅತ್ತಹಳ್ಳಿ ಲಿಂಗಣ್ಣ, ಅರುಣ್ ಕುಮಾರ್, ಬನ್ನೂರು ಸೂರಿ, ಶ್ರೀನಿವಾಸ್, ಕುಂತನಹಳ್ಳಿ ಕುಳ್ಳೆಗೌಡ, ಎ.ಪಿ.ನವೀನ್, ಮೆಡಿಕಲ್ ಮಹೇಶ್, ವೈ.ನಟೇಶ್, ಹೊನ್ನಯ್ಯ, ಬೀಡನಹಳ್ಳಿ ನಂಜುಂಡ, ಹೆಗ್ಗೂರು ವೀರಂಕೆಗೌಡ, ರಾಚಾಪ್ಪಾಜಿ, ಅಂಬರೀಷ್, ಶಿವಣ್ಣ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.