
ಜಯಪುರ: ‘ಗ್ರಾಮೀಣ ಭಾಗದಲ್ಲಿ ಕೃಷಿಕರ ಸಮಸ್ಯೆಗಳಿಗೆ ಹೋರಾಡಲು ರೈತ ಸಂಘಟನೆಗಳಲ್ಲಿ ಒಗ್ಗಟ್ಟು ಬಹುಮುಖ್ಯ’ ಎಂದು ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಹಾಡ್ಯ ರವಿ ಹೇಳಿದರು.
ಹೋಬಳಿಯ ದೂರ ಗ್ರಾಮದಲ್ಲಿ ಭಾನುವಾರ ರಾಜ್ಯ ಕಬ್ಬು ಬೆಳೆಗಾರರ ಸಂಘದ ಗ್ರಾಮ ಘಟಕದ ನಾಮಫಲಕ ಉದ್ಘಾಟಿಸಿ ಮಾತನಾಡಿದರು.
‘ರಾಜ್ಯ ಮತ್ತು ಕೇಂದ್ರ ಸರ್ಕಾರದ ನಿರ್ಲಕ್ಷ್ಯದಿಂದ ರೈತರಿಗೆ ಸರಿಯಾದ ರೀತಿಯಲ್ಲಿ ಬೆಳೆಗಳಿಗೆ ವೈಜ್ಞಾನಿಕ ಬೆಲೆ ಸಿಗದೆ ನಿರಂತರ ಹೋರಾಟ ಮಾಡಬೇಕಾಗಿದೆ. ರೈತರಿಗೆ ಮಾರಕವಾಗಿರುವ ಭೂ ಸುಧಾರಣೆ ಕಾಯ್ದೆ ಹಾಗೂ ಗೋಹತ್ಯೆ ಕಾಯ್ದೆಯಂಥ ರೈತ ವಿರೋಧಿ ಕಾನೂನುಗಳನ್ನು ತಕ್ಷಣ ಅಧಿವೇಶನದಲ್ಲಿ ರದ್ದು ಮಾಡಬೇಕು’ ಎಂದು ಒತ್ತಾಯಿಸಿದರು.
‘ದಕ್ಷಿಣ ಭಾಗದ ಕಬ್ಬು ಬೆಳೆಗಾರರಿಗೆ ಹೆಚ್ಚುವರಿ ವೈಜ್ಞಾನಿಕ ಬೆಲೆ ಕೊಡಿಸಬೇಕು. ಸಕ್ಕರೆ ಕಾರ್ಖಾನೆಗಳಿಂದ ರೈತರಿಗೆ ಬರಬೇಕಾಗಿರುವ ಬಾಕಿಯನ್ನು ತಕ್ಷಣ ಬಿಡುಗಡೆ ಮಾಡಬೇಕು. ಮೈಸೂರು, ಚಾಮರಾಜನಗರ ಜಿಲ್ಲೆಯಲ್ಲಿ ಭತ್ತ ಖರೀದಿ ಕೇಂದ್ರವನ್ನು ತಕ್ಷಣ ಆರಂಭಿಸಬೇಕು’ ಎಂದು ಒತ್ತಾಯಿಸಿದರು.
ಕಬ್ಬು ಬೆಳೆಗಾರರ ಸಂಘದ ರಾಜ್ಯ ಉಪಾಧ್ಯಕ್ಷ ಅಂಕನಹಳ್ಳಿ ತಿಮ್ಮಪ್ಪ, ರಾಜ್ಯ ನಿರ್ದೇಶಕ ಮರಿ ಸೋಮಪ್ಪ, ಜಿಲ್ಲಾಧ್ಯಕ್ಷ ಮುದ್ದಳ್ಳಿ ಚಿಕ್ಕಸ್ವಾಮಿ, ತಾಲ್ಲೂಕು ಅಧ್ಯಕ್ಷ ಅಂಬಳೆ ಮಹಾದೇವಸ್ವಾಮಿ, ಜಿಲ್ಲಾ ಗೌರವಾಧ್ಯಕ್ಷ ಎಂ.ವಿ. ಕೃಷ್ಣಪ್ಪ, ಸಂಘಟನಾ ಕಾರ್ಯದರ್ಶಿ ಸಿದ್ದರಾಜು, ತಗಡೂರು ನಾಗೇಶ್, ದೂರ ಗ್ರಾಮ ಘಟಕದ ಅಧ್ಯಕ್ಷ ಪ್ರಭುಸ್ವಾಮಿ, ಉಪಾಧ್ಯಕ್ಷ ಬಸವರಾಜು, ಶ್ರೀಕಂಠ ಮೂರ್ತಿ, ಗೌರವಾಧ್ಯಕ್ಷ ಶಂಕರಪ್ಪ, ಖಜಾಂಚಿ ನಂದೀಶ್, ನಂಜನ ಹಳ್ಳಿ ರವಿ ತಗಡೂರು ಉಮೇಶ್, ಮೊಬ್ಬಳ್ಳಿ ವೃಷಭೇಂದ್ರ, ಕೊಂಗಳ್ಳಿ ಮಹೇಶ್, ಗೀಕಳ್ಳಿ ವಿಶ್ವ ಬೀರಪ್ಪ, ಶಿವಮೂರ್ತಿ,ರೈತ ಘಟಕಗಳ ಸದಸ್ಯರು ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.