ಮೈಸೂರು: ಇಲ್ಲಿನ ಉದಯಗಿರಿಯಲ್ಲಿ ಬಾಲಕಿಯೊಬ್ಬಳ ಮೇಲೆ ಕಲ್ಲಿನಿಂದ ಹಲ್ಲೆ ನಡೆಸಿದ್ದ ಯುವಕ ಚಂದನ್ (22) ಎಂಬಾತನನ್ನು ಉದಯಗಿರಿ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.
‘ಚಂದನ್ 10ನೇ ತರಗತಿ ವ್ಯಾಸಂಗ ಮಾಡುತ್ತಿದ್ದ ಬಾಲಕಿಗೆ ಪ್ರೀತಿಸುವಂತೆ ನಿರಂತರವಾಗಿ ಕಿರುಕುಳ ನೀಡುತ್ತಿದ್ದ. ಇದೇ ವಿಚಾರವಾಗಿ ಬಾಲಕಿ ಮನೆ ಮುಂದೆ ಬಂದು ಗಲಾಟೆ ನಡೆಸಿದ್ದ. ಈ ವೇಳೆ ಬಾಲಕಿ ಮೇಲೆ ಕಲ್ಲಿನಿಂದ ಒಡೆದು ಹಲ್ಲೆ ನಡೆಸಿದ’ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.