
ಪ್ರಜಾವಾಣಿ ವಾರ್ತೆ
ಮೈಸೂರು: ನಗರದ ಕೆ.ಆರ್. ಆಸ್ಪತ್ರೆಯ ಆವರಣದ ಶೆಡ್‌ನಲ್ಲಿ ಶುಕ್ರವಾರ ಬೆಂಕಿ ಕಾಣಿಸಿಕೊಂಡಿದ್ದು, ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.
ಆಸ್ಪತ್ರೆಯ ಚೆಲುವಾಂಬ ವಾರ್ಡ್ ಬಳಿಯ ಶೆಡ್ ನಲ್ಲಿ ಕಟ್ಟಡ ನವೀಕರಣಕ್ಕೆ ವೆಲ್ಡಿಂಗ್ ಕೆಲಸ ನಡೆಯುತ್ತಿತ್ತು. ಈ ವೇಳೆ ವೆಲ್ಡಿಂಗ್ ಕಿಡಿ ಹೊತ್ತಿ ಕೊಠಡಿಯಲ್ಲಿದ್ದ ಹಾಸಿಗೆಗಳಿಗೆ ಬೆಂಕಿ ತಗುಲಿದೆ. ಈ ವಿಚಾರ ತಿಳಿದು ಕೂಡಲೇ ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿ, ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.