
ಬೆಟ್ಟದಪುರ: ಸಮೀಪದ ಬೆಟ್ಟದತುಂಗ ಕೆಳಗಿನಕೊಪ್ಪಲು ಗ್ರಾಮದಲ್ಲಿ ಹರೀಶ್ ಮತ್ತು ಯೋಗೇಶ್ ಸಹೋದರರಿಗೆ ಸೇರಿದ ಹುಲ್ಲಿನ ಬಣವೆಗಳಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಎರಡು ಹುಲ್ಲಿನ ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿವೆ.
ಬೆಂಕಿ ಅವಘಡದಿಂದ ಇವರಿಗೆ ಸುಮಾರು ₹1.50 ಲಕ್ಷ ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ. ಬಣವೆ ಸಮೀಪ ವಾಸದ ಮನೆಗಳು ಇದ್ದುದರಿಂದ ಬೆಂಕಿಯ ತೀವ್ರತೆ ಹೆಚ್ಚಾಗುತ್ತಿದ್ದಂತೆ ಅಗ್ನಿಶಾಮಕ ದಳದವರು ಸ್ಥಳಕ್ಕೆ ಬಂದು ಬೆಂಕಿ ನಿಯಂತ್ರಿಸಿದರು.
ಗ್ರಾಮದ ಮುಖಂಡ ಕೃಷ್ಣೇಗೌಡ ಮಾತನಾಡಿ, ‘ವ್ಯವಸಾಯ ಮತ್ತು ಜಾನುವಾರು ಅವಲಂಬಿಸಿ ಜೀವನ ನಡೆಸುತ್ತಿರುವ ಈ ಕುಟುಂಬಕ್ಕೆ ನಷ್ಟವಾಗಿದ್ದು, ಬೆಂಕಿ ಕಾಣಿಸಿಕೊಂಡ ತಕ್ಷಣ ಅಗ್ನಿಶಾಮಕ ದಳ ಬೆಟ್ಟದಪುರದಲ್ಲಿ ಅಗ್ನಿಶಾಮಕ ದಳದ ಘಟಕವಿದ್ದರೆ ಹೆಚ್ಚಿನ ಅನಾಹುತ ತಪ್ಪಿಸಬಹುದಿತ್ತು. ಪಿರಿಯಾಪಟ್ಟಣದಿಂದ ವಾಹನ ಆಗಮಿಸುವಷ್ಟರಲ್ಲಿ ಸಾಕಷ್ಟು ಹಾನಿ ಸಂಭವಿಸಿದೆ. ಬೆಟ್ಟದಪುರದಲ್ಲಿ ಅಗ್ನಿಶಾಮಕ ದಳದ ಘಟಕ ಪ್ರಾರಂಭಿಸಬೇಕು ಎಂದು ಒತ್ತಾಯಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.