ADVERTISEMENT

Fire In Chamundi Hills | ಚಾಮುಂಡಿ ಬೆಟ್ಟ: ಮಧ್ಯರಾತ್ರಿಯಾದರೂ ಆರದ ಬೆಂಕಿ

​ಪ್ರಜಾವಾಣಿ ವಾರ್ತೆ
Published 21 ಫೆಬ್ರುವರಿ 2025, 18:52 IST
Last Updated 21 ಫೆಬ್ರುವರಿ 2025, 18:52 IST
   

ಮೈಸೂರು: ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಶುಕ್ರವಾರ ಮಧ್ಯಾಹ್ನ ಕಾಣಿಸಿಕೊಂಡಿದ್ದ ಬೆಂಕಿ, ಮಧ್ಯರಾತ್ರಿಯಾದರೂ ಆರಿಲ್ಲ.

ಬೆಂಕಿಯು ವ್ಯಾಪಕವಾಗಿ ಹರಡುತ್ತಿದ್ದು ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ.

ಕಿಡಿಗೇಡಿಗಳು ಬೆಂಕಿ ಹಾಕಿರಬಹುದು ಎಂದು ಶಂಕಿಸಲಾಗಿದೆ. 'ಬೀಡಿ, ಸಿಗರೇಟು ಸೇದುವವರು ಬೆಂಕಿಕಡ್ಡಿ ಹಚ್ಚಿ ಸರಿಯಾಗಿ ಆರಿಸದೆ ಬಿಸಾಡಿದ್ದರಿಂದ ಬೆಂಕಿ ಹತ್ತಿಕೊಂಡಿರುವ ಸಾಧ್ಯತೆಯಿದೆ' ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.