ADVERTISEMENT

ಮೈಸೂರು: ಚಾಮುಂಡಿ ಬೆಟ್ಟದಲ್ಲಿ ಕಾಳ್ಗಿಚ್ಚು

​ಪ್ರಜಾವಾಣಿ ವಾರ್ತೆ
Published 18 ಮಾರ್ಚ್ 2020, 14:19 IST
Last Updated 18 ಮಾರ್ಚ್ 2020, 14:19 IST
ಚಾಮುಂಡಿ ಬೆಟ್ಟದ ಲಲಿತಾದ್ರಿಪುರ ಭಾಗದಲ್ಲಿ ಬುಧವಾರ ಕಾಣಿಸಿಕೊಂಡ ಕಾಡ್ಗಿಚ್ಚು
ಚಾಮುಂಡಿ ಬೆಟ್ಟದ ಲಲಿತಾದ್ರಿಪುರ ಭಾಗದಲ್ಲಿ ಬುಧವಾರ ಕಾಣಿಸಿಕೊಂಡ ಕಾಡ್ಗಿಚ್ಚು   

ಮೈಸೂರು: ಚಾಮುಂಡಿ ಬೆಟ್ಟದಲ್ಲಿನ ಲಲಿತಾದ್ರಿಪುರ ಭಾಗದಲ್ಲಿ ಬುಧವಾರ ಮಧ್ಯಾಹ್ನ 2 ಗಂಟೆ ವೇಳೆಗೆ ಕಾಡ್ಗಿಚ್ಚು ಕಾಣಿಸಿಕೊಂಡಿತು.

ವಿಷಯ ತಿಳಿದೊಡನೆ ಅರಣ್ಯ ಇಲಾಖೆಯ 50ಕ್ಕೂ ಹೆಚ್ಚು ಸಿಬ್ಬಂದಿ, ಅಗ್ನಿಶಾಮಕ ದಳದ ಆರು ವಾಹನ, ಸಿಬ್ಬಂದಿ ಹಾಗೂ ಕಾಡ್ಗಿಚ್ಚು ನಿಯಂತ್ರಿಸುವ ಸ್ವಯಂ ಸೇವಕರ ತಂಡ ಬೆಂಕಿ ನಂದಿಸುವ ಕೆಲಸದಲ್ಲಿ ತಲ್ಲೀನವಾಯ್ತು.

ಒಂದು ತಾಸಿಗೂ ಹೆಚ್ಚಿನ ಅವಧಿ ಕಾರ್ಯಾಚರಣೆ ನಡೆಸಿದ ಈ ತಂಡ, ಕಾಡ್ಗಿಚ್ಚನ್ನು ನಿಯಂತ್ರಿಸುವಲ್ಲಿ ಯಶಸ್ವಿಯಾಗಿದೆ. ಮಧ್ಯಾಹ್ನ 3.30ರ ವೇಳೆಗೆ ಕಾಡ್ಗಿಚ್ಚು ನಿಯಂತ್ರಣಕ್ಕೆ ಬಂದಿತು ಎಂದು ಸಾಮಾಜಿಕ ಅರಣ್ಯ ವಿಭಾಗದ ಡಿಸಿಎಫ್ ಪ್ರಶಾಂತ್‌ಕುಮಾರ್‌ ‘ಪ್ರಜಾವಾಣಿ’ಗೆ ತಿಳಿಸಿದರು.

ADVERTISEMENT

‘ಅಂದಾಜು 10 ಎಕರೆ ಅರಣ್ಯ ಕಾಡ್ಗಿಚ್ಚಿಗೆ ಸಿಲುಕಿದೆ. ನಿಖರ ಸಮೀಕ್ಷೆ ನಡೆದಿಲ್ಲ. ಬೆಂಕಿಯ ಕಿಡಿ ಅಲ್ಲಲ್ಲೇ ಉಳಿದಿರುವ ಅನುಮಾನವಿದೆ. ರಾತ್ರಿಯಿಡಿ ನಿಗಾ ಇಡಲು ಇಲಾಖೆ ಸಿಬ್ಬಂದಿಯ ಐವರ ತಂಡವೊಂದನ್ನು ರಚಿಸಲಾಗಿದೆ’ ಎಂದು ಅವರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.