
ನಂಜನಗೂಡು: ತಾಲ್ಲೂಕಿನ ತಗಡೂರು ಗ್ರಾಮದಲ್ಲಿ ಸೋಮವಾರ ರಾತ್ರಿ ದುಷ್ಕರ್ಮಿಗಳು ಕಟಾವಿಗೆ ಬಂದಿದ್ದ ಕಬ್ಬಿನ ಗದ್ದೆಗೆ ಬೆಂಕಿ ಹಚ್ಚಿದ ಪರಿಣಾಮ ಎರಡು ಎಕರೆ ಪ್ರದೇಶದಲ್ಲಿ ಬೆಳೆದಿದ್ದ ₹3.5 ಲಕ್ಷ ಮೌಲ್ಯದ ಕಬ್ಬು ಬೆಳೆ ನಾಶವಾಗಿದೆ.
ಗ್ರಾಮದ ಸೋಮಪ್ಪ ಎಂಬುವವರಿಗೆ ಸೇರಿದ ಜಮೀನಿನಲ್ಲಿ ಬೆಳೆದ ಕಬ್ಬಿನ ಬೆಳೆಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದರಿಂದ ಕಬ್ಬಿನ ಬೆಳೆ ಸುಟ್ಟು ಬೂದಿಯಾಗಿದೆ.
‘ಸಾಲ ಮಾಡಿ ಕಬ್ಬಿನ ಬೆಳೆ ಬೆಳೆದಿದ್ದೆ, ಮುಂದಿನ ಎರಡು ದಿನಗಳಲ್ಲಿ ಕಬ್ಬು ಕಟಾವು ಮಾಡಬೇಕಿತ್ತು. ಕಿಡಿಗೇಡಿಗಳು ಬೆಂಕಿ ಹಚ್ಚಿ ನಾಶ ಮಾಡಿದ್ದಾರೆ. ಇದರಿಂದಾಗಿ ₹4 ಲಕ್ಷ ನಷ್ಟವಾಗಿದೆ. ಸಾಲ ಹೇಗೆ ತೀರಿಸುವುದು ಎಂಬುದೇ ಚಿಂತೆಯಾಗಿದೆ’ ಎಂದು ಸೋಮಪ್ಪ ಅಳವತ್ತುಕೊಂಡರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.