ADVERTISEMENT

ಮೊದಲು ರಾಷ್ಟ್ರಧ್ವಜ ನಂತರ ಕನ್ನಡ ಧ್ವಜ: ಸಚಿವ ಸೋಮಣ್ಣ

​ಪ್ರಜಾವಾಣಿ ವಾರ್ತೆ
Published 2 ನವೆಂಬರ್ 2019, 10:29 IST
Last Updated 2 ನವೆಂಬರ್ 2019, 10:29 IST
ವಿ.ಸೋಮಣ್ಣ
ವಿ.ಸೋಮಣ್ಣ   

ಮೈಸೂರು: ‘ಕನ್ನಡ ರಾಜ್ಯೋತ್ಸವವೇ ಆಗಲಿ ಅಥವಾ ಬೇರೆ ಇನ್ನಾವ ಆಚರಣೆಯೇ ಆಗಲಿ ಅಲ್ಲಿ ಮೊದಲು ರಾಷ್ಟ್ರಧ್ವಜ ಹಾರಿಸಬೇಕು. ನಂತರವಷ್ಟೇ ಕನ್ನಡ ಧ್ವಜ. ಇದು ಮೊದಲಿನಿಂದಲೂ ನಡೆದುಕೊಂಡು ಬಂದ ಸಂಪ್ರದಾಯ’ ಎಂದು ಸಚಿವ ವಿ.ಸೋಮಣ್ಣ ಶುಕ್ರವಾರ ಇಲ್ಲಿ ಹೇಳಿದರು.

‘ನಾವು ಏನೇ ಮಾಡಿದರೂ ರಾಷ್ಟ್ರದ ಏಕತೆಗೆ ಧಕ್ಕೆ ಬಾರದ ಹಾಗೆ ನೋಡಿಕೊಳ್ಳಬೇಕು. ಕರ್ನಾಟಕವು ಭಾರತದ ಅವಿಭಾಜ್ಯ ಅಂಗ ಎಂಬುದು ನಮ್ಮ ಗಮನದಲ್ಲಿರಬೇಕು. ಮೊದಲು ರಾಷ್ಟ್ರಧ್ವಜ ಹಾರಿಸುವುದರಲ್ಲಿ ಯಾವುದೇ ತಪ್ಪಿಲ್ಲ. ಈ ಬಗ್ಗೆ ಗೊಂದಲ ಅನಗತ್ಯ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT