ADVERTISEMENT

ಜ. 11ರಂದು ‘ಫಿಟ್‌ ಮೈಸೂರು ವಾಕಥಾನ್‌’

​ಪ್ರಜಾವಾಣಿ ವಾರ್ತೆ
Published 24 ಡಿಸೆಂಬರ್ 2025, 6:14 IST
Last Updated 24 ಡಿಸೆಂಬರ್ 2025, 6:14 IST
   

ಮೈಸೂರು: ನಗರವನ್ನು ಆರೋಗ್ಯಕರ, ಸ್ವಚ್ಛ, ಹಸಿರು ಹಾಗೂ ಸುರಕ್ಷಿತ ನಗರವನ್ನಾಗಿ ರೂಪಿಸುವ ನಿಟ್ಟಿನಲ್ಲಿ 2026ರ ಜನವರಿ 11ರಂದು ಫಿಟ್‌ ಮೈಸೂರು ವಾಕಥಾನ್‌ ಆಯೋಜಿಸಲಾಗಿದೆ ಎಂದು ಮೈಸೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಕೆ.ಎನ್.‌ ಲೋಕನಾಥ್‌ ತಿಳಿಸಿದರು.

‘ಜಿಎಸ್‌ಎಸ್‌ ಸಮೂಹ ಸಂಸ್ಥೆಗಳು, ಮೈಸೂರು ಜಿಮ್‌ ಅಸೋಸಿಯೇಷನ್‌ ಸಹಯೋಗದಲ್ಲಿ ಕಾರ್ಯಕ್ರಮ ನಡೆಯಲಿದೆ. ಬೆಳಿಗ್ಗೆ 6ಕ್ಕೆ ಮಾನಸಗಂಗೋತ್ರಿಯ ಬಯಲು ರಂಗಮಂದಿರದಲ್ಲಿ ಚಾಲನೆ ದೊರೆಯಲಿದ್ದು, 5 ಕಿ.ಮೀ. ನಡಿಗೆ ಇರಲಿದೆ. 10 ಸಾವಿರಕ್ಕೂ ಹೆಚ್ಚು ಜನರು ಭಾಗವಹಿಸುವ ನಿರೀಕ್ಷೆ ಇದೆ. ಮಾಜಿ ಕ್ರಿಕೆಟಿಗ ಜಾವಗಲ್‌ ಶ್ರೀನಾಥ್‌, ಉಷಾ ಹೆಗಡೆ ಪಾಲ್ಗೊಳ್ಳಲಿದ್ದಾರೆ’ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಇದೇ ಸಂದರ್ಭದಲ್ಲಿ ವಾಕಥಾನ್‌ ಪೋಸ್ಟರ್‌ಗಳನ್ನು ಬಿಡುಗಡೆ ಹಾಗೂ ಕ್ಯುಆರ್‌ ಕೋಡ್‌ ಆಧಾರಿತ ನೋಂದಣಿ ಪ್ರಕ್ರಿಯೆಗೆ ಚಾಲನೆ ನೀಡಲಾಯಿತು.

ADVERTISEMENT

ಜಿಎಸ್‌ಎಸ್‌ ಸಮೂಹ ಸಂಸ್ಥೆಗಳ ಮುಖ್ಯಸ್ಥ ಶ್ರೀಹರಿ ದ್ವಾರಕನಾಥ್‌, ಜಿಮ್‌ ಅಸೋಸಿಯೇಷನ್‌ನ ಹರ್ಷ, ಚಿರಾಗ್‌ ಆಡ್ಸ್‌ನ ವಿವೇಕ್‌, ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಧರ್ಮಾಪುರ ನಾರಾಯಣ್‌ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.