
ಮೈಸೂರು: ಬೆಂಗಳೂರಿನ ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ, ಕಾಂಗ್ರೆಸ್ ಮುಖಂಡ ಆರ್.ವಿ.ದೇವರಾಜ್ (67) ಸೋಮವಾರ ಹೃದಯಾಘಾತದಿಂದ ನಿಧನರಾದರು.
ಚಾಮುಂಡಿ ಬೆಟ್ಟದಲ್ಲಿ ತೀವ್ರ ಹೃದಯಾಘಾತಕ್ಕೆ ಒಳಗಾದ ಅವರನ್ನು ತಕ್ಷಣವೇ ಅಪೋಲೊ ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ನೀಡಿದ ನಂತರ ಇಲ್ಲಿನ ಜಯದೇವ ಹೃದ್ರೋಗ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯೆ ಮೃತಪಟ್ಟರು.
ಮಂಗಳವಾರ ದೇವರಾಜ್ ಅವರ ಜನ್ಮದಿನ. ಆ ಕಾರಣಕ್ಕಾಗಿಯೇ ಅವರು ಮೈಸೂರಿನ ಚಾಮುಂಡೇಶ್ವರಿ ದೇವರ ದರ್ಶನಕ್ಕಾಗಿ ಬಂದಿದ್ದರು. ಆಗಲೇ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ.
ದೇವರಾಜು ಅವರು, 1989 ಮತ್ತು 1999ರ ವಿಧಾನಸಭಾ ಚುನಾವಣೆಯಲ್ಲಿ ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಆಯ್ಕೆಯಾಗಿದ್ದರು. 2004ರಿಂದ 2010ರವರೆಗೆ ವಿಧಾನ ಪರಿಷತ್ ಸದಸ್ಯರಾಗಿದ್ದರು. 2013ರಿಂದ 2018ರವರೆಗೆ
ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.