ADVERTISEMENT

ಎಸ್.ಎಂ.ಕೃಷ್ಣ, ಜಾವಗಲ್ ಶ್ರೀನಾಥ್ ಸೇರಿ ನಾಲ್ವರಿಗೆ ಗೌರವ ಡಾಕ್ಟರೇಟ್ ಪ್ರದಾನ

​ಪ್ರಜಾವಾಣಿ ವಾರ್ತೆ
Published 3 ಮಾರ್ಚ್ 2024, 9:08 IST
Last Updated 3 ಮಾರ್ಚ್ 2024, 9:08 IST
<div class="paragraphs"><p>ಮೈಸೂರು ವಿಶ್ವವಿದ್ಯಾಲಯದ ಕ್ರಾಫರ್ಡ್‌ ಭವನದಲ್ಲಿ ಭಾನುವಾರ ನಡೆದ 104ನೇ ವಾರ್ಷಿಕ ಘಟಿಕೋತ್ಸವದಲ್ಲಿ ರಾಜ್ಯಪಾಲ ಥಾವರ್‌ಚಂದ್‌ ಗೆಹಲೋತ್‌ ಅವರು ಜಾವಗಲ್ ಶ್ರೀನಾಥ್, ಎಂ.ಆರ್.ಸೀತಾರಾಮ್, ಎಸ್.ಎಂ.ಕೃಷ್ಣ ಹಾಗೂ ಭಾಷ್ಯಂ ಸ್ವಾಮೀಜಿ ಅವರಿಗೆ ಗೌರವ ಡಾಕ್ಟರೇಟ್‌ ಪದವಿ ಪ್ರದಾನ ಮಾಡಿದರು.</p></div>

ಮೈಸೂರು ವಿಶ್ವವಿದ್ಯಾಲಯದ ಕ್ರಾಫರ್ಡ್‌ ಭವನದಲ್ಲಿ ಭಾನುವಾರ ನಡೆದ 104ನೇ ವಾರ್ಷಿಕ ಘಟಿಕೋತ್ಸವದಲ್ಲಿ ರಾಜ್ಯಪಾಲ ಥಾವರ್‌ಚಂದ್‌ ಗೆಹಲೋತ್‌ ಅವರು ಜಾವಗಲ್ ಶ್ರೀನಾಥ್, ಎಂ.ಆರ್.ಸೀತಾರಾಮ್, ಎಸ್.ಎಂ.ಕೃಷ್ಣ ಹಾಗೂ ಭಾಷ್ಯಂ ಸ್ವಾಮೀಜಿ ಅವರಿಗೆ ಗೌರವ ಡಾಕ್ಟರೇಟ್‌ ಪದವಿ ಪ್ರದಾನ ಮಾಡಿದರು.

   

ಮೈಸೂರು: ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ, ಸುದರ್ಶನ ನರಸಿಂಹ ಕ್ಷೇತ್ರದ ಪೀಠಾಧಿಪತಿ ಭಾಷ್ಯಂ ಸ್ವಾಮೀಜಿ, ಬೆಂಗಳೂರಿನ ಗೋಕುಲ ಶಿಕ್ಷಣ ಪ್ರತಿಷ್ಠಾನದ ಉಪಾಧ್ಯಕ್ಷ ಎಂ.ಆರ್. ಸೀತಾರಾಂ ಹಾಗೂ ಕ್ರಿಕೆಟಿಗ ಜಾವಗಲ್ ಶ್ರೀನಾಥ್ ಅವರಿಗೆ ಗೌರವ ಡಾಕ್ಟರೇಟ್‌ ಪ್ರದಾನ ಮಾಡಲಾಯಿತು.

ಮಾನಸಗಂಗೋತ್ರಿಯ ಕ್ರಾಫರ್ಡ್‌ ಭವನದಲ್ಲಿ ಭಾನುವಾರ ನಡೆದ 104ನೇ ಘಟಿಕೋತ್ಸವದಲ್ಲಿ ರಾಜ್ಯಪಾಲ ಥಾವರ್‌ಚಂದ್‌ ಗೆಹಲೋತ್‌ ಅವರು ಪದವಿ ನೀಡಿದರು. 103ನೇ ಘಟಿಕೋತ್ಸವದ ಗೌರವ ಡಾಕ್ಟರೇಟ್‌ಗೆ ಆಯ್ಕೆಯಾಗಿದ್ದ ಜಾವಗಲ್‌ ಶ್ರೀನಾಥ್‌ ಗೈರಾಗಿದ್ದರಿಂದ ಅವರಿಗೆ ಈ ಬಾರಿಯ ಘಟಿಕೋತ್ಸವದಲ್ಲಿ ಪದವಿ ನೀಡಲಾಯಿತು.

ADVERTISEMENT

ಹೃದ್ರೋಗ ತಜ್ಞ ಡಾ.ಸಿ.ಎನ್. ಮಂಜುನಾಥ್ ಘಟಿಕೋತ್ಸವ ಭಾಷಣ ಮಾಡಿದರು. ಉನ್ನತ ಶಿಕ್ಷಣ ಸಚಿವ ಎಂ‌.ಸಿ. ಸುಧಾಕರ್, ಕುಲಪತಿ ಪ್ರೊ.ಎನ್‌.ಕೆ.ಲೋಕನಾಥ್‌, ಕುಲಸಚಿವರಾದ ವಿ.ಆರ್.ಶೈಲಜಾ, ಪ್ರೊ.ಕೆ.ಎಂ.ಮಹದೇವನ್‌ ಹಾಜರಿದ್ದರು.

32,249 ಅಭ್ಯರ್ಥಿಗಳಿಗೆ ಪದವಿ: ಘಟಿಕೋತ್ಸವದಲ್ಲಿ 32,249 ಅಭ್ಯರ್ಥಿಗಳು ಪದವೀಧರರಾದರು. ಅವರಲ್ಲಿ 19,992 ಮಹಿಳೆಯರು (ಶೇ 61.99) ಇದ್ದರು. 45 ಮಹಿಳೆಯರು ಮತ್ತು 55 ಪುರುಷರು ಸೇರಿದಂತೆ ಒಟ್ಟು 100 ಮಂದಿ ಪಿಎಚ್‌.ಡಿ ಪಡೆದರೆ, ಸ್ನಾತಕೋತ್ತರ, ಪದವಿಯ ವಿವಿಧ ವಿಭಾಗಗಳಲ್ಲಿ ಸಾಧನೆ ಮಾಡಿದ 252 ಮಂದಿಗೆ 436 ಚಿನ್ನದ ಪದಕ ಮತ್ತು 266 ನಗದು ಬಹುಮಾನ ನೀಡಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.