ADVERTISEMENT

ಮೈಸೂರು | ಇಂದು ಉಚಿತ ನಾಗರಿಕ ಸೇವಾ ಪರೀಕ್ಷಾ ತರಬೇತಿ ಕಾರ್ಯಾಗಾರ

ಪ್ರಜಾವಾಣಿ, ಡೆಕ್ಕನ್ ಹೆರಾಲ್ಡ್ ಸಹಯೋಗ

​ಪ್ರಜಾವಾಣಿ ವಾರ್ತೆ
Published 19 ಡಿಸೆಂಬರ್ 2019, 2:30 IST
Last Updated 19 ಡಿಸೆಂಬರ್ 2019, 2:30 IST
   

ಮೈಸೂರು: ನವೋದಯ ಫೌಂಡೇಷನ್ ಹಾಗೂ ಪ್ರಮತಿ ಹಿಲ್ ವ್ಯೂ ಅಕಾಡೆಮಿಯು ‘ಪ್ರಜಾವಾಣಿ’ ಮತ್ತು ’ಡೆಕ್ಕನ್‌ ಹೆರಾಲ್ಡ್‌’ ಸಹಯೋಗದೊಂದಿಗೆ ಆಯೋಜಿಸಿರುವ ‘ನವೋ– ಪ್ರಮತಿ’ ನಾಗರಿಕ ಸೇವಾ ಪರೀಕ್ಷಾ ತರಬೇತಿ ಕಾರ್ಯಕ್ರಮದ ಉದ್ಘಾಟನೆ ಮತ್ತು ಒಂದು ದಿನದ ಉಚಿತ ಕಾರ್ಯಾಗಾರ ಡಿ.19ರಂದು ನಡೆಯಲಿದೆ.

ಯುಪಿಎಸ್‌ಸಿ, ಕೆಪಿಎಸ್‌ಸಿ ಪರೀಕ್ಷೆಗಳ ಕುರಿತ ಕಾರ್ಯಾಗಾರ ಬೆಳಿಗ್ಗೆ 9ರಿಂದ ಮಧ್ಯಾಹ್ನ 2ರ ವರೆಗೆ ಕಲಾಮಂದಿರದಲ್ಲಿ ನಡೆಯಲಿದೆ. ತರಬೇತಿ ಕೇಂದ್ರದ 8 ತಿಂಗಳ ಯುಪಿಎಸ್‌ಸಿ ತರಬೇತಿ ಶಿಬಿರದ ಉದ್ಘಾಟನೆಯೂ ಇದೇ ವೇಳೆ ನಡೆಯಲಿದೆ.

ಜಿಲ್ಲಾಧಿಕಾರಿ ಅಭಿರಾಂ ಜಿ.ಶಂಕರ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ರವಿ ಡಿ.ಚನ್ನಣ್ಣನವರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್, ಕೇಂದ್ರ ಸರ್ಕಾರದ ನಿವೃತ್ತ ಹೆಚ್ಚುವರಿ ಕಾರ್ಯದರ್ಶಿ ಸಿ.ವಿ.ಗೋಪಿನಾಥ್, ಮೈಸೂರು ವಿ.ವಿ.ಕುಲಸಚಿವ ಪ್ರೊ.ಆರ್.ಶಿವಪ್ಪ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.

ADVERTISEMENT

ಪ್ರಮುಖ ಸಂಪನ್ಮೂಲ ವ್ಯಕ್ತಿಗಳಾಗಿ ಯುಪಿಎಸ್‌ಸಿ ಮಾಸ್ಟರ್‌ ಟ್ರೇನರ್ ಸಂದೀಪ್ ಮಹಾಜನ್ ವಿದ್ಯಾರ್ಥಿಗಳಿಗೆ ಮಾಹಿತಿ ನೀಡುವರು. 2019ನೇ ಸಾಲಿನಲ್ಲಿ ಯುಪಿಎಸ್‌ಸಿ ಮುಖ್ಯಪರೀಕ್ಷೆ ಬರೆದಿರುವ ನವೋ–ಪ್ರಮತಿ ಸಂಸ್ಥೆಯ ಡಿ.ಆನಂದ್, ಪ್ರತೀಕ್ ರಘುನಂದನ್, ಪುನೀತ್ ನಂಜಯ್ಯ ಅವರು ಸಂವಾದ ನಡೆಸುವರು.

ವಿಶೇಷ ಆಹ್ವಾನಿತರಾಗಿ ಪ್ರಮತಿ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಎಚ್.ವಿ.ರಾಜೀವ್, ಖಜಾಂಚಿ ಎಸ್.ಫಣಿರಾಜ್, ವಿಜಯಚೇತನ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಎಂ.ಶ್ವೇತಾ ಹಾಗೂ ನವೋದಯ ಫೌಂಡೇಷನ್‌ನ ಕಾರ್ಯದರ್ಶಿ ಎಸ್.ಆರ್‌.ರವಿ ಭಾಗವಹಿಸುವರು.

ನೋಂದಣಿಯು ಬೆಳಿಗ್ಗೆ 8.30ರಿಂದ ಆರಂಭವಾಗಲಿದೆ. ಮಾಹಿತಿಗೆ ಮೊ: 6364381776, 9741869722 ಸಂಪರ್ಕಿಸಲು ನವೋದಯ ಫೌಂಡೇಷನ್‌ನ ವ್ಯವಸ್ಥಾಪಕ ನಿರ್ದೇಶಕಿ ಸಿ.ಎಸ್.ಪ್ರಿಯದರ್ಶಿನಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.