ADVERTISEMENT

ನಂಜನಗೂಡು | ‘ತ್ಯಾಗ, ಬಲಿದಾನಗಳಿಂದ ಸ್ವಾತಂತ್ರ್ಯ’

​ಪ್ರಜಾವಾಣಿ ವಾರ್ತೆ
Published 16 ಆಗಸ್ಟ್ 2025, 7:57 IST
Last Updated 16 ಆಗಸ್ಟ್ 2025, 7:57 IST
ನಂಜನಗೂಡಿನ ಜೂನಿಯರ್ ಕಾಲೇಜು ಮೈದಾನದಲ್ಲಿ  ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ಶುಕ್ರವಾರ ನಡೆದ  ಸ್ವಾತಂತ್ರ್ಯ ದಿನಾಚರಣೆ ಸಮಾರಂಭದಲ್ಲಿಶಾಸಕ ದರ್ಶನ್ ಧ್ರುವನಾರಾಯಣ ಧ್ವಜವಂದನೆ ಸ್ವೀಕರಿಸಿದರು
ನಂಜನಗೂಡಿನ ಜೂನಿಯರ್ ಕಾಲೇಜು ಮೈದಾನದಲ್ಲಿ  ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ಶುಕ್ರವಾರ ನಡೆದ  ಸ್ವಾತಂತ್ರ್ಯ ದಿನಾಚರಣೆ ಸಮಾರಂಭದಲ್ಲಿಶಾಸಕ ದರ್ಶನ್ ಧ್ರುವನಾರಾಯಣ ಧ್ವಜವಂದನೆ ಸ್ವೀಕರಿಸಿದರು   

ನಂಜನಗೂಡು: ನಮ್ಮ ಹಿರಿಯರು ತಮ್ಮ ತ್ಯಾಗ ಬಲಿದಾನಗಳಿಂದ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದಾರೆ, ನಾವೆಲ್ಲರೂ ನಮ್ಮ ಹಕ್ಕುಗಳನ್ನು ಅರಿತು ಸಂವಿಧಾನದ ಮಾರ್ಗದಲ್ಲಿ ನಡೆಯುವುದೇ ನಮ್ಮ ಹಿರಿಯರಿಗೆ ಕೊಡುವ ಗೌರವವಾಗಿದೆ ಎಂದು ಶಾಸಕ ದರ್ಶನ್ ಧ್ರುವನಾರಾಯಣ ಹೇಳಿದರು.

ನಗರದ ಜೂನಿಯರ್ ಕಾಲೇಜು ಮೈದಾನದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ಶುಕ್ರವಾರ ಆಯೋಜಿಸಿದ್ದ ಸ್ವಾತಂತ್ರ್ಯ ದಿನಾಚರಣೆ ಸಮಾರಂಭದಲ್ಲಿಅವರು ಮಾತನಾಡಿದರು.

‘ವಿವಿಧ ಭಾಷೆ, ಸಂಸ್ಕೃತಿ ಇರುವ ನಮ್ಮ ದೇಶದಲ್ಲಿ ಅಂಬೇಡ್ಕರ್ ಅವರ ಸಂವಿಧಾನದಿಂದಾಗಿ ನಮ್ಮೆಲ್ಲರಿಗೂ ಸಮಾನತೆ ದೊರಕಿದೆ, ಆದ್ದರಿಂದ ಸಂವಿಧಾನವನ್ನು ರಕ್ಷಿಸುವ ಕೆಲಸ ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ. ಈ ನಿಟ್ಟಿನಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಸಂವಿಧಾನದ ಅರಿವು ಮೂಡಿಸಲು ಸಂವಿಧಾನ ಪೀಠಿಕೆ ಓದುವ ಕಾರ್ಯಕ್ರಮ ರೂಪಿಸಿದೆ’ ಎಂದರು.

ADVERTISEMENT

ಕಾರ್ಯಕ್ರಮದಲ್ಲಿ ಯಡಿಯಾಲಮಹದೇವಸ್ವಾಮಿ, ದಸಂಸ ಜಿಲ್ಲಾ ಸಂಚಾಲಕ ಕಾರ್ಯ ಬಸವಣ್ಣ, ರೈತ ಹರತಲೆ ಲೋಕೇಶ್, ಮಹೇಂದ್ರ, ವೈದ್ಯ ಮಧುಸೂದನ್ ಹಾಗೂ ಎಸ್ಎಸ್ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಗಳಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ಶಾಲಾ ವಿದ್ಯಾರ್ಥಿಗಳು ನಡೆಸಿಕೊಟ್ಟ ಆಕರ್ಷಕ ಪಥಸಂಚಲನ, ಸಾಂಸ್ಕೃತಿಕ ಕಾರ್ಯಕ್ರಮಗಳು ಪ್ರೇಕ್ಷಕರ ಮನಸೂರೆಗೊಂಡವು.

ಕಾರ್ಯಕ್ರಮದಲ್ಲಿ ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು, ಹುಸ್ಕೂರು ಅಂಬಿಕಾ, ಕಳಲೆ ಕೇಶವಮೂರ್ತಿ, ನಗರಸಭೆ ಅಧ್ಯಕ್ಷ ಶ್ರೀಕಂಠಸ್ವಾಮಿ, ಗ್ಯಾರಂಟಿ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ಕೆ.ಮಾರುತಿ, ಶ್ರೀಕಂಠನಾಯಕ, ನಾಗೇಶ್ ರಾಜ್, ನಗರಸಭೆ ಸದಸ್ಯರಾದ ಎಸ್.ಪಿ. ಮಹೇಶ್, ಗಂಗಾಧರ, ಶ್ವೇತ ಲಕ್ಷ್ಮಿ, ಗಾಯತ್ರಿ, ಮಹದೇವ ಪ್ರಸಾದ್, ಖಾಲಿದ್ ಅಹಮ್ಮದ್, ಕೆ.ಎಂ.ಬಸವರಾಜು, ಎನ್ಎಸ್‌.ಯೋಗೀಶ್, ಪಿ.ದೇವ, ರಮೇಶ್ ಮುಖಂಡರಾದ ನಂದಕುಮಾರ್, ರವಿಪ್ರಕಾಶ್, ಸೋಮು, ಜಯಮಾಲಾ, ತಾ.ಪಂ ಇಒ ಜೆರಾಲ್ಡ್ ರಾಜೇಶ್, ಡಿವೈಎಸ್ಪಿ ರಘು, ಸಿಪಿಐ ರವೀಂದ್ರ, ಬಿಇಒ ಮಹೇಶ್ ಉಪಸ್ಥಿತರಿದ್ದರು.

ನಂಜನಗೂಡಿನ ಜೂನಿಯರ್ ಕಾಲೇಜು ಮೈದಾನದಲ್ಲಿ  ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ಶುಕ್ರವಾರ ಆಯೋಜಿಸಿದ್ದ  ಸ್ವಾತಂತ್ರ್ಯ ದಿನಾಚರಣೆ ಸಮಾರಂಭದಲ್ಲಿ ಸಮಾಜದ ವಿವಿಧ ಸಾಧಕರನ್ನು ಸನ್ಮಾನಿಸಿ ಗೌರವಿಸಲಾಯಿತು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.