ADVERTISEMENT

ಮೈಸೂರು | ಪ್ರೊ.ಸುಬ್ಬಣ್ಣ ಅಯ್ಯಪ್ಪನ್‌ ಅಂತ್ಯಕ್ರಿಯೆ

​ಪ್ರಜಾವಾಣಿ ವಾರ್ತೆ
Published 11 ಮೇ 2025, 14:01 IST
Last Updated 11 ಮೇ 2025, 14:01 IST
ಪ್ರೊ.ಸುಬ್ಬಣ್ಣ ಅಯ್ಯಪ್ಪನ್‌
ಪ್ರೊ.ಸುಬ್ಬಣ್ಣ ಅಯ್ಯಪ್ಪನ್‌   

ಮೈಸೂರು: ಕೃಷಿ ವಿಜ್ಞಾನಿ, ಭಾರತೀಯ ಕೃಷಿ ಸಂಶೋಧನಾ ಮಂಡಳಿಯ (ಐಸಿಎಆರ್‌) ನಿವೃತ್ತ ನಿರ್ದೇಶಕ, ‘ಪದ್ಮಶ್ರೀ’ ಪುರಸ್ಕೃತ ಪ್ರೊ.ಸುಬ್ಬಣ್ಣ ಅಯ್ಯಪ್ಪನ್‌ (70) ಅವರ ಅಂತ್ಯಕ್ರಿಯೆ ಇಲ್ಲಿನ ಬಂಬೂಬಜಾರ್‌ ಬಳಿಯ ಜೋಡಿ ತೆಂಗಿನಮರ ಮುಕ್ತಿಧಾಮದಲ್ಲಿ ಭಾನುವಾರ ಸಂಜೆ ನಡೆಯಿತು.

ಕೆ.ಆರ್‌.ಆಸ್ಪತ್ರೆಯಲ್ಲಿ ಮುಂಜಾನೆ 9ರರ ಸುಮಾರಿಗೆ ಮರಣೋತ್ತರ ಪರೀಕ್ಷೆ ಮುಗಿಸಿ, ವಿಶ್ವೇಶ್ವರನಗರದ ಅಕ್ಕಮಹಾದೇವಿ ರಸ್ತೆಯಲ್ಲಿನ ಮನೆಗೆ (ಸಂಕಲ್ಪ ಬಸಂತ್‌ ಅಪಾರ್ಟ್‌ಮೆಂಟ್‌) ಪಾರ್ಥಿವ ಶರೀರವನ್ನು ತರಲಾಯಿತು. ಅಲ್ಲಿ ಸಾರ್ವಜನಿಕ ದರ್ಶಕ್ಕೆ ವ್ಯವಸ್ಥೆ ಮಾಡಲಾಗಿತ್ತು.

ಮಧ್ಯಾಹ್ನ 1.15ಕ್ಕೆ ಹೆಚ್ಚುವರಿ ಜಿಲ್ಲಾಧಿಕಾರಿ ಪಿ.ಶಿವರಾಜು ನೇತೃತ್ವದಲ್ಲಿ ಸಕಲ ಸರ್ಕಾರಿ ಗೌರವ ಸಲ್ಲಿಸಲಾಯಿತು. ತ್ರಿವರ್ಣಧ್ವಜವನ್ನು ಹೊದಿಸಿ, ರಾಷ್ಟ್ರಗೀತೆ ನುಡಿಸಿ, ಗಾಳಿಯಲ್ಲಿ 3 ಸುತ್ತು ಗುಂಡು ಹಾರಿಸಿ ಗೌರವ ಸಲ್ಲಿಸಲಾಯಿತು. ವಿವಿಧ ಕೃಷಿ ವಿಶ್ವವಿದ್ಯಾಲಯಗಳ ಕುಲಪತಿಗಳು, ನಿವೃತ್ತ ಕುಲಪತಿಗಳು, ಮೀನುಗಾರಿಕೆ ವಿಜ್ಞಾನ ಸಂಸ್ಥೆಗಳ ನಿರ್ದೇಶಕರು, ಕೃಷಿ, ಪಶುಸಂಗೋಪನೆ ಸಂಸ್ಥೆಗಳ ಪ್ರಮುಖರು, ವಿಜ್ಞಾನಿಗಳು ಅಂತಿಮ ದರ್ಶನ ಪಡೆದು ಕಂಬನಿ ಮಿಡಿದರು. ಪತ್ನಿ, ಪುತ್ರಿಯರು, ಅಳಿಯಂದಿರು ಉಪಸ್ಥಿತರಿದ್ದರು.

ADVERTISEMENT

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ಬಳಿ ಕಾವೇರಿ ನದಿಯಲ್ಲಿ ಶನಿವಾರ ಮಧ್ಯಾಹ್ನ ಮೃತದೇಹ ಪತ್ತೆಯಾಗಿತ್ತು. ಮೇ 7ರಂದು ಮನೆಯಿಂದ ತೆರಳಿದ್ದ ಅವರು ಕಾಣೆಯಾಗಿದ್ದರು. ಈ ಬಗ್ಗೆ ಪ್ರಕರಣ ದಾಖಲಾಗಿತ್ತು. ಅವರ ನಿಗೂಢ ಸಾವು ಕುಟುಂಬದವರು ಹಾಗೂ ಪರಿಚಯದವರಿಗೆ ಅಚ್ಚರಿ–ಆಘಾತ ತಂದಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.