ADVERTISEMENT

ಮೈತ್ರಿಯಿಂದ ಎರಡು ಪಕ್ಷಕ್ಕೂ ಶಕ್ತಿ: ಜಿ.ಟಿ. ದೇವೇಗೌಡ

​ಪ್ರಜಾವಾಣಿ ವಾರ್ತೆ
Published 22 ಸೆಪ್ಟೆಂಬರ್ 2023, 16:15 IST
Last Updated 22 ಸೆಪ್ಟೆಂಬರ್ 2023, 16:15 IST
<div class="paragraphs"><p>ಜಿ.ಟಿ. ದೇವೇಗೌಡ</p></div>

ಜಿ.ಟಿ. ದೇವೇಗೌಡ

   

ಮೈಸೂರು: ಎನ್‌ಡಿಎ ಮೈತ್ರಿಕೂಟಕ್ಕೆ ಜೆಡಿಎಸ್‌ ಸೇರ್ಪಡೆಗೆ ತೀರ್ಮಾನವಾಗಿರುವುದನ್ನು ಮುಕ್ತವಾಗಿ ಸ್ವಾಗತಿಸಿರುವ ಪಕ್ಷದ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡ, ‘ಈ ಮೈತ್ರಿಯಿಂದ ಎರಡೂ ಪಕ್ಷಗಳಿಗೆ ಶಕ್ತಿ ಬರಲಿದೆ. ಅನುಕೂಲವೂ ಆಗಲಿದೆ’ ಎಂದು ಹೇಳಿದ್ದಾರೆ.

‘ಪ್ರಧಾನಿ ನರೇಂದ್ರ ಮೋದಿ ಹಾಗೂ ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡ ಅವರು ದೇಶ ಹಾಗೂ ರಾಜ್ಯದ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಸಮಾಲೋಚನೆ ಮಾಡಿದ್ದರು. ದೇಶದ ಹಿತಕ್ಕಾಗಿ ಜೆಡಿಎಸ್‌ ಎನ್‌ಡಿಎ ಭಾಗವಾಗಬೇಕೆಂದು ಅವರು ಕೋರಿದ್ದರ ಪರಿಣಾಮವಾಗಿ ಪಕ್ಷದ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರೊಂದಿಗೆ ಸುದೀರ್ಘ ಸಮಾಲೋಚಿಸಿ ನಿರ್ಧರಿಸಿರುವುದು ಒಳ್ಳೆಯ ನಡೆಯಾಗಿದೆ’ ಎಂದಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.