ಮೈಸೂರು: ಜಿಲ್ಲಾಡಳಿತ, ಮಹಾನಗರ ಪಾಲಿಕೆ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಯೋಗದಲ್ಲಿ ಗಾಂಧಿ ಜಯಂತಿ ಅಂಗವಾಗಿ ಪ್ರಾರ್ಥನಾ ಸಭೆಯನ್ನು ಅ. 2ರಂದು ಬೆಳಿಗ್ಗೆ 8ಕ್ಕೆ ನಗರದ ಪುರಭವನದಲ್ಲಿ ಆಯೋಜಿಸಲಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ, ಪಶುಸಂಗೋಪನೆ ಮತ್ತು ರೇಷ್ಮೆ ಸಚಿವ ಕೆ.ವೆಂಕಟೇಶ್, ಹಾಗೂ ನಗರಾಭಿವೃದ್ಧಿ ಸಚಿವ ಬಿ.ಎಸ್. ಸುರೇಶ್ ಭಾಗವಹಿಸುವರು. ಚಾಮರಾಜ ಕ್ಷೇತ್ರದ ಶಾಸಕ ಕೆ. ಹರೀಶ್ ಗೌಡ ಅಧ್ಯಕ್ಷತೆ ವಹಿಸುವರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.