ADVERTISEMENT

ದೇಶಕ್ಕೆ ಸ್ವಾತಂತ್ರ್ಯ ದೊರೆಯಲು ಗಾಂಧೀಜಿ ನೇತೃತ್ವದಲ್ಲಿ ನಡೆದ ಬಲಿದಾನ ಕಾರಣ: CM

​ಪ್ರಜಾವಾಣಿ ವಾರ್ತೆ
Published 2 ಅಕ್ಟೋಬರ್ 2025, 5:02 IST
Last Updated 2 ಅಕ್ಟೋಬರ್ 2025, 5:02 IST
   

ಮೈಸೂರು: ನಮ್ಮ ದೇಶಕ್ಕೆ ಸ್ವಾತಂತ್ರ್ಯ ದೊರೆಯುವುದಕ್ಕೆ ಮಹಾತ್ಮ ಗಾಂಧೀಜಿ ನೇತೃತ್ವದಲ್ಲಿ ನಡೆದ ಹೋರಾಟ, ತ್ಯಾಗ, ಬಲಿದಾನ ಕಾರಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಮರಿಸಿದರು.

ಇಲ್ಲಿನ ಗಾಂಧಿ ವೃತ್ತದಲ್ಲಿ ಗಾಂಧಿ ಜಯಂತಿ ಅಂಗವಾಗಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಅವರು ಮಾತನಾಡಿದರು.

ಅವರು ಹಾಕಿಕೊಟ್ಟ ದಾರಿಯಲ್ಲಿ ನಡೆಯುವ ಶಕ್ತಿ ದೊರೆಯಲೆಂದು ಪ್ರಾರ್ಥಿಸುತ್ತೇನೆ. ಈ ಸಂದರ್ಭದಲ್ಲಿ ಲಾಲ್‌ ಬಹದ್ದೂರ್‌ ಶಾಸ್ತ್ರಿ ಅವರನ್ನೂ ನೆನೆಯುತ್ತೇನೆ. ಅವರು ಅತ್ಯಂತ ಪ್ರಾಮಾಣಿಕವಾದ ವ್ಯಕ್ತಿ. ಗಾಂಧಿ ಜಯಂತಿಯಂದೇ ವಿಜಯದಶಮಿ ಮೆರವಣಿಗೆಯೂ ನಡೆಯುತ್ತಿದೆ. ಹೀಗಾಗಿ, ನಾಡಿನ ಎಲ್ಲ ಜನರಿಗೆ ವಿಜಯದಶಮಿಯ ಶುಭಾಶಯಗಳನ್ನು ಕೋರುತ್ತೇನೆ ಎಂದರು.

ADVERTISEMENT

ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್‌.ಸಿ. ಮಹದೇವ‍ಪ್ಪ, ಶಾಸಕ ಕೆ.ಹರೀಶ್‌ಗೌಡ, ಕಾಂಗ್ರೆಸ್ ಗ್ರಾಮಾಂತರ ಜಿಲ್ಲಾ ಸಮಿತಿ ಅಧ್ಯಕ್ಷ ಬಿ.ಜೆ. ವಿಜಯ್‌ಕುಮಾರ್‌, ನಗರ ಜಿಲ್ಲಾ ಸಮಿತಿ ಅಧ್ಯಕ್ಷ ಆರ್‌. ಮೂರ್ತಿ ‍ಪಾಲ್ಗೊಂಡಿದ್ದರು.

ನಂತರ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸುತ್ತೂರು ಮಠಕ್ಕೆ ಭೇಟಿ ನೀಡಿ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಆಶೀರ್ವಾದ ಪಡೆದರು. ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್‌.ಸಿ. ಮಹದೇವಪ್ಪ ಜೊತೆಗಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.