ಎಚ್.ಡಿ.ಕೋಟೆ: ಪಟ್ಟಣದ ಗದ್ದಿಗೆ ವೃತ್ತದ ಬಳಿ ಒಣ ಗಾಂಜಾ ಸೊಪ್ಪು ಮಾರಾಟ ಮಾಡಲು ಹೊಂಚು ಹಾಕುತ್ತಿದ್ದ ವ್ಯಕ್ತಿಯನ್ನು ಪಟ್ಟಣದ ಪೊಲೀಸರು ಶನಿವಾರ ಬಂಧಿಸಿದ್ದು, ಗಾಂಜಾ ಮತ್ತು ಪ್ರಯಾಣಿಕರ ಆಟೊವನ್ನು ವಶಕ್ಕೆ ಪಡೆದಿದ್ದಾರೆ.
ಪಟ್ಟಣದ ನಿವಾಸಿ ದೇವರಾಜು ಕುಮಾರ್, 175 ಗ್ರಾಂ ಗಾಂಜಾ ಸೊಪ್ಪನ್ನು ಬಿಡಿಬಿಡಿಯಾಗಿ ಪ್ಯಾಕ್ ಮಾಡಿ ಮಾರಾಟ ಮಾಡುತ್ತಿದ್ದಾಗ ಸಿಕ್ಕಿ ಬಿದ್ದಿದ್ದಾನೆ.
ಆರೋಪಿ ಮತ್ತು ಮಾಲನ್ನು ವಶಕ್ಕೆ ಪಡೆದು ಪ್ರಕರಣ ದಾಖಲು ಮಾಡಿದ ಪೊಲೀಸರು, ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.