ADVERTISEMENT

ಅಕ್ರಮವಾಗಿ ಗ್ಯಾಸ್ ರೀಫಿಲ್ಲಿಂಗ್; ಬಂಧನ

​ಪ್ರಜಾವಾಣಿ ವಾರ್ತೆ
Published 5 ಅಕ್ಟೋಬರ್ 2018, 20:06 IST
Last Updated 5 ಅಕ್ಟೋಬರ್ 2018, 20:06 IST

ಮೈಸೂರು: ಅಕ್ರಮವಾಗಿ ಗ್ಯಾಸ್ ರೀಫಿಲ್ಲಿಂಗ್ ಮಾಡುತ್ತಿದ್ದ ಗೌಸಿಯಾನಗರದ ಸಮೀರ್ (28) ಎಂಬಾತನನ್ನು ಬಂಧಿಸಿರುವ ಅಪರಾಧ ಪತ್ತೆ ದಳ ಹಾಗೂ ಉದಯಗಿರಿ ಠಾಣೆ ಪೊಲಿಸರು 7 ಗ್ಯಾಸ್ ಸಿಲಿಂಡರ್ ಹಾಗೂ ₹ 3,410 ನಗದು ವಶಪಡಿಸಿಕೊಂಡಿದ್ದಾರೆ.

ಗೌಸಿಯಾನಗರದ ಮಹಮದೀಯ ರಸ್ತೆಯಲ್ಲಿ ಚಾವಣಿ ಇಲ್ಲದ ಶೆಡ್‍ನಲ್ಲಿ ಅಕ್ರಮವಾಗಿ ಗ್ಯಾಸ್ ರೀಫಿಲ್ಲಿಂಗ್ ಮಾಡುತ್ತಿದ್ದಾಗ ಪೊಲೀಸರು ದಾಳಿ ನಡೆಸಿದರು. ದಾಳಿ ವೇಳೆ ಆಹಾರ ಇಲಾಖೆಯ ಅಧಿಕಾರಿಗಳೂ ಇದ್ದರು. ಪ್ರಕರಣ ಉದಯಗಿರಿ ಠಾಣೆಯಲ್ಲಿ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT