ADVERTISEMENT

ಹುಣಸೂರು: ಶುಂಠಿ ಕಳವು ಆರೋಪಿಗಳ ಬಂಧನ

​ಪ್ರಜಾವಾಣಿ ವಾರ್ತೆ
Published 23 ಜುಲೈ 2023, 16:06 IST
Last Updated 23 ಜುಲೈ 2023, 16:06 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಹುಣಸೂರು: ತಾಲ್ಲೂಕಿನ ಹನಗೋಡು ಹೋಬಳಿ ಚೆನ್ನಸೋಗೆ ಗ್ರಾಮದ ರೈತ ಪ್ರಸನ್ನ ಅವರ ಹೊಲದಲ್ಲಿ ಬೆಳೆದಿದ್ದ ಶುಂಠಿಯನ್ನು ಬಗೆದು ಕಳವು ಮಾಡಿದ್ದು ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಘಟನೆ ವಿವರ: ರೈತ ತನ್ನ ಇಬ್ಬರು ಸ್ನೇಹಿತರೊಂದಿಗೆ ಬಂಡವಾಳ ಹೂಡಿ ಶುಂಠಿ ಬೆಳೆದಿದ್ದರು. ಜುಲೈ 15 ರಂದು ಮುಕ್ಕಾಲು ಎಕರೆ ಪ್ರದೇಶದಲ್ಲಿ ಬೆಳೆದ ಶುಂಠಿಯನ್ನು ರಾತ್ರೋರಾತ್ರಿ ಭೂಮಿ ಬಗೆದು ಕಳವು ಮಾಡಿದ್ದರು. ಈ ಸಂಬಂಧ ಪ್ರಸನ್ನ ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಸರ್ಕಲ್ ಇನ್‌ಸ್ಪೆಕ್ಟರ್ ರವಿ ಮಾರ್ಗದರ್ಶನದಲ್ಲಿ ಅಪರಾಧ ವಿಭಾಗದ ಎ.ಎಸ್.ಐ ಆಂಥೋನಿ ಕ್ರೂಸ್ ಮತ್ತು ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಆರೋಪಿಗಳಾದ ಚಂದ್ರು, ರಾಜು ಮತ್ತು ಭೈರನಾಯಕ ಎಂಬುವವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿ ಶುಂಠಿ ಮಾರಾಟ ಮಾಡಿ ಗಳಿಸಿದ ಹಣವನ್ನು ಜಪ್ತಿ ಮಾಡಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.