ADVERTISEMENT

ಮೈಸೂರು| ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಪೋಕ್ಸೊ ಪ್ರಕರಣ ದಾಖಲು

​ಪ್ರಜಾವಾಣಿ ವಾರ್ತೆ
Published 1 ಸೆಪ್ಟೆಂಬರ್ 2022, 2:20 IST
Last Updated 1 ಸೆಪ್ಟೆಂಬರ್ 2022, 2:20 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ    

ಮೈಸೂರು: ಒಂಬತ್ತೂವರೆ ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವುದಕ್ಕೆ ಸಂಬಂಧಿಸಿದಂತೆ ನಗರದ ಠಾಣೆಯೊಂದರಲ್ಲಿ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಅನಾರೋಗ್ಯಕ್ಕೀಡಾಗಿದ್ದ ಬಾಲಕಿಯನ್ನು ಆಕೆಯ ತಾಯಿ ಖಾಸಗಿ ಆಸ್ಪತ್ರೆಗೆ ದಾಖಲಿಸಿದಾಗ, ವೈದ್ಯರ ಪರೀಕ್ಷೆಯಿಂದ ಪ್ರಕರಣ ಬೆಳಕಿಗೆ ಬಂದಿದೆ.

ಆಸ್ಪತ್ರೆಯಲ್ಲಿ ಬಾಲಕಿ ಚಿಕಿತ್ಸೆ ಪಡೆಯುತ್ತಿದ್ದು, ಪೊಲೀಸರು ಇನ್ನೂ ಯಾವುದೇ ಹೇಳಿಕೆ ಪಡೆಯಲು ಸಾಧ್ಯವಾಗಿಲ್ಲ.

ADVERTISEMENT

ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ತನಿಖೆ ಆರಂಭಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.