ADVERTISEMENT

‘ದಿನಬಳಕೆಗೆ ನೀರು ಕೊಡಿ’

ಖಾಲಿ ಕೊಡ ಪ್ರದರ್ಶಿಸಿ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 7 ಮಾರ್ಚ್ 2024, 5:48 IST
Last Updated 7 ಮಾರ್ಚ್ 2024, 5:48 IST
‘ದಿನಬಳಕೆಗೆ ನೀರು ನೀಡಬೇಕು’ ಎಂದು ಒತ್ತಾಯಿಸಿ ಕನ್ನಡ ಚಳವಳಿ ವಾಟಾಳ್‌ ಪಕ್ಷದ ಕಾರ್ಯಕರ್ತರು ಹಾರ್ಡಿಂಜ್ ವೃತ್ತದ ಬಳಿ ಬುಧವಾರ ಖಾಲಿ ಕೊಡ ಪ್ರದರ್ಶಿಸಿ ಪ್ರತಿಭಟಿಸಿದರು
‘ದಿನಬಳಕೆಗೆ ನೀರು ನೀಡಬೇಕು’ ಎಂದು ಒತ್ತಾಯಿಸಿ ಕನ್ನಡ ಚಳವಳಿ ವಾಟಾಳ್‌ ಪಕ್ಷದ ಕಾರ್ಯಕರ್ತರು ಹಾರ್ಡಿಂಜ್ ವೃತ್ತದ ಬಳಿ ಬುಧವಾರ ಖಾಲಿ ಕೊಡ ಪ್ರದರ್ಶಿಸಿ ಪ್ರತಿಭಟಿಸಿದರು   

ಮೈಸೂರು: ‘ದಿನಬಳಕೆಗೆ ನೀರು ನೀಡಬೇಕು’ ಎಂದು ಒತ್ತಾಯಿಸಿ ಕನ್ನಡ ಚಳವಳಿ ವಾಟಾಳ್‌ ಪಕ್ಷದ ಕಾರ್ಯಕರ್ತರು ಹಾರ್ಡಿಂಜ್ ವೃತ್ತದ ಬಳಿ ಬುಧವಾರ ಖಾಲಿ ಕೊಡ ಪ್ರದರ್ಶಿಸಿ ಪ್ರತಿಭಟಿಸಿದರು.

ಪಕ್ಷದ ಅಧ್ಯಕ್ಷ ವಾಟಾಳ್‌ ನಾಗರಾಜ್‌ ಮಾತನಾಡಿ, ‘ಬಿಸಿಲಿನ ಝಳ ಹೆಚ್ಚುತ್ತಿದ್ದು, ನೀರಿನ ಸಮಸ್ಯೆ ಆರಂಭವಾಗಿದೆ. ಬೆಂಗಳೂರು ಮತ್ತು ಮೈಸೂರು ನಗರದಲ್ಲಿ ನೀರಿಗಾಗಿ ಹಾಹಾಕಾರ ಶುರುವಾಗಿದ್ದು, ಜನರಿಗೆ ದಿನನಿತ್ಯ ಬಳಕೆಗೆ ಬೇಕಾದ ನೀರು ಪೂರೈಸಲು ಸರ್ಕಾರ ಕ್ರಮ ಕೈಗೊಳ್ಳಬೇಕು. ಅಧಿಕಾರಕ್ಕೆ ಬರುವ ಮೊದಲು ಕಾಂಗ್ರೆಸ್‌ ನೀಡಿದ ಭರವಸೆಯಂತೆ ಮೇಕೆದಾಟು ಯೋಜನೆಯನ್ನು ಕೂಡಲೇ ಆರಂಭಿಸಬೇಕು’ ಎಂದು ಒತ್ತಾಯಿಸಿದರು.

ಮುಖಂಡರಾದ ತಾಯೂರು ವಿಠಲ ಮೂರ್ತಿ, ಎಂ.ಚಂದ್ರಶೇಖರ್, ಬಿ.ಎ.ಶಿವಶಂಕರ, ಸುರೇಶ್‌ ಬಾಬು, ತೇಜೇಶ್‌ ಲೋಕೇಶ್‌ ಗೌಡ, ಪುಷ್ಪಾವತಿ ಇದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.