ADVERTISEMENT

ಮೈಸೂರಿಗೆ ಗೀತಾ ಗೋಪಿನಾಥ್‌ ಭೇಟಿ

​ಪ್ರಜಾವಾಣಿ ವಾರ್ತೆ
Published 20 ಮೇ 2019, 10:13 IST
Last Updated 20 ಮೇ 2019, 10:13 IST
ಗೀತಾ ಗೋಪಿನಾಥ್‌
ಗೀತಾ ಗೋಪಿನಾಥ್‌   

ಮೈಸೂರು: ಅಂತರರಾಷ್ಟ್ರೀಯ ಹಣಕಾಸು ನಿಧಿಯಲ್ಲಿ (ಐಎಂಎಫ್‌) ಮುಖ್ಯ ಆರ್ಥಿಕ ಸಲಹೆಗಾರರಾಗಿರುವ ಆರ್ಥಿಕ ತಜ್ಞೆ ಗೀತಾ ಗೋಪಿನಾಥ್‌ ಅವರು ಮೈಸೂರಿಗೆ ಭೇಟಿ ನೀಡಿದ್ದಾರೆ.‌‌

ಮೈಸೂರಿನವರೇ ಆದ ಅವರು ಪ್ರಮುಖ ಜವಾಬ್ದಾರಿ ವಹಿಸಿಕೊಂಡ ಬಳಿಕ ಇದೇ ಮೊದಲ ಬಾರಿ ಇಲ್ಲಿಗೆ ಬಂದಿದ್ದಾರೆ.

ಜೆಎಸ್‌ಎಸ್‌ ಮಹಾವಿದ್ಯಾಪೀಠ ಸೋಮವಾರ ಆಯೋಜಿಸಿರುವ ಕಾರ್ಯಕ್ರಮದಲ್ಲಿ ಅವರು ಉಪನ್ಯಾಸ ನೀಡಲಿದ್ದಾರೆ.

ADVERTISEMENT

ಗೀತಾ ಅವರ ಪೋಷಕರಾದ ಟಿ.ವಿ.ಗೋಪಿನಾಥ್‌ ಹಾಗೂ ವಿಜಯಲಕ್ಷ್ಮಿ ಮೈಸೂರಿನಲ್ಲಿ ನೆಲೆಸಿದ್ದಾರೆ. ಕೇರಳದ ಕಣ್ಣೂರು ಜಿಲ್ಲೆಯ ಇವರು 35 ವರ್ಷಗಳ ಹಿಂದೆ ಇಲ್ಲಿಗೆ ಬಂದು ಕೃಷಿ ಹಾಗೂ ಹೈನುಗಾರಿಕೆ ಚಟುವಟಿಕೆಗಳಲ್ಲಿ ತೊಡಗಿದ್ದಾರೆ.

ಗೀತಾ ಅವರು ಇಲ್ಲಿನ ನಿರ್ಮಲಾ ಕಾನ್ವೆಂಟ್‌ನಲ್ಲಿ 4ರಿಂದ 10ನೇ ತರಗತಿ ವರೆಗೆ ಓದಿದರು. ಬಳಿಕ ಮಹಾಜನ ಪಿಯು ಕಾಲೇಜಿನಲ್ಲಿ ವ್ಯಾಸಂಗ ಮಾಡಿದರು. ಆನಂತರ ನವದೆಹಲಿಯ ಲೇಡಿ ಶ್ರೀರಾಮ ಕಾಲೇಜಿಗೆ ಸೇರಿದರು. ಉನ್ನತ ವ್ಯಾಸಂಗಕ್ಕೆ ಅಮೆರಿಕಕ್ಕೆ ತೆರಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.