ADVERTISEMENT

ಬಾಕಿ ವೇತನ ಪಾವತಿಗೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 25 ಸೆಪ್ಟೆಂಬರ್ 2020, 13:11 IST
Last Updated 25 ಸೆಪ್ಟೆಂಬರ್ 2020, 13:11 IST
ಬಾಕಿ ವೇತನ ಪಾವತಿಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘದ ನೇತೃತ್ವದಲ್ಲಿ ಕಾರ್ಯಕರ್ತರು ಜಿಲ್ಲಾ ಪಂಚಾಯಿತಿ ಮುಂದೆ ಶುಕ್ರವಾರ ಪ್ರತಿಭಟನೆ ನಡೆಸಿದರು
ಬಾಕಿ ವೇತನ ಪಾವತಿಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘದ ನೇತೃತ್ವದಲ್ಲಿ ಕಾರ್ಯಕರ್ತರು ಜಿಲ್ಲಾ ಪಂಚಾಯಿತಿ ಮುಂದೆ ಶುಕ್ರವಾರ ಪ್ರತಿಭಟನೆ ನಡೆಸಿದರು   

ಮೈಸೂರು: ಬಾಕಿ ವೇತನ ಪಾವತಿ, ಬಡ್ತಿ ಸೇರಿದಂತೆ ಇನ್ನಿತರ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಿಐಟಿಯು ಜತೆ ಸಂಯೋಜಿತಗೊಂಡ ಕರ್ನಾಟಕ ರಾಜ್ಯ ಗ್ರಾಮ ಪಂಚಾಯಿತಿ ನೌಕರರ ಸಂಘದ ನೇತೃತ್ವದಲ್ಲಿ ಕಾರ್ಯಕರ್ತರು ಶುಕ್ರವಾರ ಜಿಲ್ಲಾ ಪಂಚಾಯಿತಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

ಪಂಪ್‌ ಆಪರೇಟರ್‌ಗಳಿಗೆ ಅರ್ಧ ಸಂಬಳ ನೀಡುವ ಪ್ರಸ್ತಾವವನ್ನು ಕೈಬಿಡಬೇಕು, ಅವರಿಗೆ ಬಡ್ತಿ ನೀಡಬೇಕು, ಎಲ್ಲ ಸಿಬ್ಬಂದಿಗೆ ಪಿಂಚಣಿ, ವೈದ್ಯಕೀಯ ವೆಚ್ಚ ನೀಡಬೇಕು ಎಂದು ಮನವಿ ಮಾಡಿದರು.

ಎಲ್ಲ ಸಿಬ್ಬಂದಿಯ ವೇತನಕ್ಕಾಗಿ ಕೊರತೆ ಇರುವ ₹ 382 ಕೋಟಿಯನ್ನು ಬೇರೆ ಬೇರೆ ಯೋಜನೆಗಳಿಂದ ಹಣ ಸಂಗ್ರಹಿಸಿ ಮಂಜೂರಾತಿ ನೀಡಬೇಕು, ಕಂಪ್ಯೂಟರ್ ಆಪರೇಟರ್‌ಗಳಿಗೆ ಬಡ್ತಿ ನೀಡಲು ವೃಂದ ಮತ್ತು ನೇಮಕಾತಿಗಳಿಗೆ ತಿದ್ದುಪಡಿ ತರಬೇಕು ಎಂದು ಆಗ್ರಹಿಸಿದರು.

ADVERTISEMENT

14 ಮತ್ತು 15ನೇ ಹಣಕಾಸು ಆಯೋಗದ ಹಣದಲ್ಲಿ ಬಾಕಿ ಉಳಿದ ಸಿಬ್ಬಂದಿಗೆ ವೇತನ ನೀಡಬೇಕು, ನಿವೃತ್ತಿಯಾದವರಿಗೆ 15 ತಿಂಗಳ ಗ್ರಾಚ್ಯೂಟಿ ನೀಡಬೇಕು ಎಂದು ಒತ್ತಾಯಿಸಿದರು.

ಸಂಘಟನೆಯ ಅಧ್ಯಕ್ಷ ಕೆ.ಬಸವರಾಜು, ಖಜಾಂಚಿ ವರುಣ ನಾಗರಾಜ್ ಹಾಗೂ ಕಾರ್ಯದರ್ಶಿ ಲೋಕೇಶ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.