
ಪ್ರಜಾವಾಣಿ ವಾರ್ತೆ
ಮೈಸೂರು: ನಂಜನಗೂಡು ತಾಲ್ಲೂಕಿನ ಹಾಡ್ಯ ಗ್ರಾಮ ಪಂಚಾಯಿತಿ ಸಭೆಯಲ್ಲಿ ಸೋಮವಾರ ಎರಡು ಗುಂಪುಗಳ ಮಧ್ಯೆ ಮಾರಾಮಾರಿ ನಡೆದಿದ್ದು, ಹಲವು ಮಂದಿ ಗಾಯಗೊಂಡಿದ್ದಾರೆ.
ವಿವಿಧ ವಸತಿ ಯೋಜನೆಯ ಮನೆ ಹಂಚಿಕೆ ವಿಚಾರದಲ್ಲಿ ಎರಡೂ ಗುಂಪುಗಳ ಕಾರ್ಯಕರ್ತರ ನಡುವೆ ಆರಂಭವಾದ ವಾಗ್ವಾದ ಹೊಡೆದಾಟಕ್ಕೆ ತಿರುಗಿತು. ಕುರ್ಚಿಗಳನ್ನು ತೆಗೆದುಕೊಂಡು ಪರಸ್ಪರ ಬಡಿದಾಡಿಕೊಂಡರು.
ಗಲಾಟೆಯಲ್ಲಿ ರಾಜಶೇಖರ್, ಗಣೇಶ್ ಎಂಬುವವರಿಗೆ ತಲೆಗೆ ಪೆಟ್ಟು ಬಿದ್ದಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರೆ. ಉಳಿದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಸಂಪೂರ್ಣ ಘಟನೆಯ ವಿಡಿಯೊ ಚಿತ್ರೀಕರಣ ಮಾಡಲಾಗಿದ್ದು, ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.