ADVERTISEMENT

‘ಮತ ಬೆಲೆ ₹50 ಸಾವಿರದಿಂದ ₹1 ಲಕ್ಷದವರೆಗೆ’–ಎಚ್.ವಿಶ್ವನಾಥ್

​ಪ್ರಜಾವಾಣಿ ವಾರ್ತೆ
Published 3 ಡಿಸೆಂಬರ್ 2021, 18:38 IST
Last Updated 3 ಡಿಸೆಂಬರ್ 2021, 18:38 IST
ಅಡಗೂರು ಎಚ್‌. ವಿಶ್ವನಾಥ್‌
ಅಡಗೂರು ಎಚ್‌. ವಿಶ್ವನಾಥ್‌   

ಮೈಸೂರು: ‘ವಿಧಾನ ಪರಿಷತ್‌ ಚುನಾವಣೆಯಲ್ಲಿ ಪ್ರತಿ ಮತಕ್ಕೆ ಹಾಸನ, ಕೊಡಗಿನಲ್ಲಿ ₹ 50 ಸಾವಿರದಿಂದ ₹ 1 ಲಕ್ಷದವರೆಗೆ ದರ ನಿಗದಿ ಮಾಡಲಾಗಿದೆ ಎಂದು ಗ್ರಾಮ ಪಂಚಾಯಿತಿ ಸದಸ್ಯರು ತಿಳಿಸಿದ್ದಾರೆ. ಚುನಾವಣೆಯನ್ನು ಯಾವ ಸ್ಥಿತಿಗೆ ತಂದು ನಿಲ್ಲಿಸಿದ್ದೇವೆ ಎಂಬುದನ್ನು ರಾಜಕೀಯ ನಾಯಕರು ಆತ್ಮಾಲೋಕನ ಮಾಡಿಕೊಳ್ಳಬೇಕು’ ಎಂದು ವಿಧಾನ ಪರಿಷತ್ ಸದಸ್ಯ ಅಡಗೂರು ಎಚ್ ವಿಶ್ವನಾಥ್ ಆಗ್ರಹಿಸಿದರು.

ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಅವರು, ‘ಕನಿಷ್ಠ ₹ 40 ಕೋಟಿಯಿಂದ ₹ 1,700 ಕೋಟಿಯವರೆಗೆ ಆಸ್ತಿ ಘೋಷಿಸಿಕೊಂಡವರಿಗೆ ಟಿಕೆಟ್ ನೀಡಿರುವ ಮುಖಂಡರಿಗೆ ಚುನಾವಣೆ ದಿಕ್ಕೆಡಿಸುತ್ತಿದ್ದೇವೆ ಎಂದು ಅನ್ನಿಸುವುದಿಲ್ಲವೆ? ಸಿದ್ದರಾಮಯ್ಯ, ಬಿ.ಎಸ್.ಯಡಿಯೂರಪ್ಪ, ಎಚ್.ಡಿ.ಕುಮಾರಸ್ವಾಮಿ ಜನರಿಗೆ ನೀಡುತ್ತಿರುವ ಸಂದೇಶವಾದರೂ ಏನು’ ಎಂದು ಪ್ರಶ್ನಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT