ADVERTISEMENT

ಹೊಸ ಸಿಎಂ ಸರ್ಕಾರದಲ್ಲಿ ಬಾಂಬೆ ಟೀಂನ ಯಾರನ್ನೂ ಮಂತ್ರಿ ಮಾಡಬೇಡಿ: ಎಚ್.ವಿಶ್ವನಾಥ್

​ಪ್ರಜಾವಾಣಿ ವಾರ್ತೆ
Published 21 ಜುಲೈ 2021, 8:25 IST
Last Updated 21 ಜುಲೈ 2021, 8:25 IST
ಎಚ್.ವಿಶ್ವನಾಥ್
ಎಚ್.ವಿಶ್ವನಾಥ್   

ಮೈಸೂರು: ಹೊಸ ಮುಖ್ಯಮಂತ್ರಿ ನೇತೃತ್ವದ ಸರ್ಕಾರದಲ್ಲಿ ಬಾಂಬೆ ಟೀಂನ ಯಾರನ್ನೂ ಮಂತ್ರಿ ಮಾಡಬೇಡಿ ಎಂದು ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಬುಧವಾರ ಇಲ್ಲಿ ತಿಳಿಸಿದರು.

‘ಬದಲಾವಣೆಗಾಗಿ 17 ಮಂದಿ ಬೆಂಬಲ ನೀಡಿದ್ದರು.ಆದರೆ, ಅಧಿಕಾರ ಸಿಕ್ಕ ಮೇಲೆ ಬದಲಾದರು. ಇವರಿಗೆಲ್ಲಾ ಮುಖ್ಯಮಂತ್ರಿ ಆಗಿದ್ದವರು ಯಡಿಯೂರಪ್ಪ ಅಲ್ಲ. ಬದಲಾಗಿ ಅವರ ಪುತ್ರ ವಿಜಯೇಂದ್ರ. ಇವರ ಸಾಧನೆ ಶೂನ್ಯ. ಹೀಗಾಗಿ, ಈ 17 ಜನಕ್ಕೆ ಅಧಿಕಾರ ನೀಡದಿದ್ದರೂ ಪರವಾಗಿಲ್ಲ. ಅವರು ಎಲ್ಲಿಗೂ ಹೋಗುವುದಿಲ್ಲ. ಹೋದರೆ ಹೋಗಲಿ ರಾಜ್ಯದಲ್ಲಿ ಮತ್ತೆ ಚುನಾವಣೆ ನಡೆಯಲಿ’ ಎಂದು ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.