
ಸರಗೂರು: ಹಿಂದೂ ಸಂಘಟನೆಗಳ ಜಾಗೃತಿಗಾಗಿ ಪಟ್ಟಣದ ಹನುಮ ಜಯಂತಿ ಅಚರಣಾ ಸಮಿತಿ ಭಾನುವಾರ ಆಯೋಜಿಸಿದ್ದ ಹನುಮ ಜಯಂತಿ ಉತ್ಸವದ ಶೋಭಾಯಾತ್ರೆ ಬಹಳ ವಿಜೃಂಭಣೆಯಿಂದ ನಡೆಯಿತು. ದಾರಿಯುದ್ದಕ್ಕೂ ಭಗವಾನ್ ಹನುಮನ ಘೋಷಣೆ ಮೊಳಗಿದವು.
ಶೋಭಾಯಾತ್ರೆ ಅಂಗವಾಗಿ ಪಲ್ಲಕ್ಕಿಯಲ್ಲಿ ಕೂರಿಸಿದ್ದ ಹನುಮಂತನ ಭಾವಚಿತ್ರಕ್ಕೆ ದಡದಹಳ್ಳಿ ಮಠದ ಷಡಕ್ಷರಿ ಸ್ವಾಮೀಜಿ, ಬಿಡಗಲು ಪಡುವಲು ವಿರಕ್ತಮಠದ ಮಹದೇವ ಸ್ವಾಮೀಜಿ, ಭರತೇಶ್ ಗುರೂಜಿ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಸರಗೂರು ತಾಲ್ಲೂಕು ಅಧ್ಯಕ್ಷ ಕೆ.ಎಂ.ವೀರಭದ್ರಪ್ಪ, ಸರ್ವೆ ರಾಜಣ್ಣ ಟ್ರಸ್ಟ್ ಅಧ್ಯಕ್ಷ ಎಸ್. ವಿ.ವೆಂಕಟೇಶ್, ಬಸವ ಬಳಗದ ಅಧ್ಯಕ್ಷ ಹಂಚೀಪುರ ಗಣಪತಿ, ಮುಖಂಡ ಜಯಪ್ರಕಾಶ್, ಹನುಮಜಯಂತಿ ಆಚರಣಾ ಸಮಿತಿ ಅಧ್ಯಕ್ಷ ನವೀನ್‌ಕುಮಾರ್ ಸೇರಿದಂತೆ ಮುಖಂಡರು ಹನುಮನ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ವಿಧ್ಯುಕ್ತವಾಗಿ ಚಾಲನೆ ನೀಡಿದರು.
ಪಟ್ಟಣದ ಕೆಇಬಿ ಕಚೇರಿಯಿಂದ ಹೊರಟ ಶೋಭಾಯಾತ್ರೆ ಮೆರವಣಿಗೆಯು ಹುಣಸೂರು-ಎನ್.ಬೇಗೂರು ರಸ್ತೆ ಮಾರ್ಗವಾಗಿ ಬಸ್ ನಿಲ್ದಾಣ, ಮಹಾವೀರ ವೃತ್ತ, ಚಿಕ್ಕದೇವಮ್ಮನ ವೃತ್ತ, ಮೂಲಕ ಎರಡನೇ ಮುಖ್ಯ ರಸ್ತೆಯಲ್ಲಿ ಸಾಗಿ ಸಂತೆಮಾಳದ ಮಾಸ್ತಮ್ಮನ ದೇವಸ್ಥಾನದಲ್ಲಿ ಸಮಾವೇಶಗೊಂಡಿತು.
ಪಟ್ಟಣದ ಪ್ರಮುಖ ಬೀದಿಗಳು ಕೇಸರಿಮಯವಾಗಿದ್ದು, ಹನುಮನ ಭಕ್ತರ ಕೈಯಲ್ಲಿ ಕೇಸರಿ ಬಾವುಟಗಳು ರಾರಾಜಿಸಿದವು. ಇದಲ್ಲದೆ ಭಕ್ತರು ಹನುಮನ ಧ್ಯಾನ, ಶ್ಲೋಕಗಳನ್ನು ಪಠಣ ಮಾಡಿ, ವಿವಿಧ ಘೋಷಣೆ ಕೂಗುತ್ತಾ ದಾರಿಯುದ್ದಕ್ಕೂ ಜೈಕಾರ ಹಾಕಿದರು. ಹಳೆ ಹೆಗ್ಗುಡಿಲು ನೀಲಕಂಠ ತಂಡದಿಂದ ವೀರಗಾಸೆ ನೃತ್ಯ ಪ್ರದರ್ಶನವಿತ್ತು. ಅಲ್ಲಲ್ಲಿ ಮಜ್ಜಿಗೆ, ಪಾನಕ ವಿತರಿಸಲಾಯಿತು. ಮುಸ್ಲಿಂ ಸಮುದಾಯದವರು ಮಜ್ಜಿಗೆ ವಿತರಣೆ ಮಾಡಿದ್ದು, ವಿಶೇಷವಾಗಿತ್ತು.
ಮುಖಂಡರಾದ ಜಯಪ್ರಕಾಶ್ ಮಾತನಾಡಿ, ಎಲ್ಲರೂ ಒಗ್ಗೂಡಿ ಹನುಮನ ಜಯಂತಿ ಆಚರಣೆ ಮಾಡುತ್ತಿರುವುದು ಸಂತಸ ತಂದಿದೆ. ಸದೃಢ ಭಾರತವನ್ನು ನಿರ್ಮಾಣ ಮಾಡುವ ಜವಾಬ್ದಾರಿ ಯುಕವಕರ ಮೇಲಿದೆ. ಹೀಗಾಗಿ ಎಲ್ಲರೂ ಶ್ರಮಿಸಬೇಕು. ಯಾವುದೇ ಅಹಿತಕರ ಘಟನೆಗಳು ಜರುಗದಂತೆ ಎಚ್ಚರವಹಿಸಿದರೆ ಒಳಿತು ಎಂದು ತಿಳಿಸಿದರು.
ಬಿಜೆಪಿ ಜಿಲ್ಲಾಧ್ಯಕ್ಷ ಕುಂಬ್ರಳ್ಳಿ ಸುಬ್ಬಣ್ಣ, ಪಟ್ಟಣ ಪಂಚಾಯಿತಿ ಉಪಾಧ್ಯಕ್ಷ ಶಿವಕುಮಾರ್, ಸದಸ್ಯರಾದ ವಿನಾಯಕ ಪ್ರಸಾದ್, ನೂರಾಳಸ್ವಾಮಿ, ಉಮಾ ರಾಮಚಂದ್ರ, ಮಾಜಿ ಮೇಯರ್ ಶಿವಕುಮಾರ್, ಮೈಸೂರು ರಕ್ಷಣಾ ವೇದಿಕೆಯ ಅಧ್ಯಕ್ಷ ಮೈಕಾ ಪ್ರೇಮ್‌ಕುಮಾರ್, ಮುಖಂಡರಾದ ಮೊತ್ತ ಬಸವರಾಜಪ್ಪ, ಶ್ರೀನಾಥ್, ಬಿಜೆಪಿ ಟೌನ್ ಅಧ್ಯಕ್ಷ ಚನ್ನಪ್ಪ, ಸಿ.ಕೆ.ಗಿರೀಶ್, ಹಂಚೀಪುರ ಗುರುಸ್ವಾಮಿ, ಮುಖಂಡರಾದ ದಡದಹಳ್ಳಿ ಡಿ.ಜಿ.ಶಿವರಾಜು, ಭಜರಂಗಿ ರಾಮು, ಗುರುಸ್ವಾಮಿ, ರವಿಕುಮಾರ್, ಮಂಜುನಾಥ್, ಗೋಬಿ ರಂಗಸ್ವಾಮಿ, ಶಿವಕುಮಾರ್, ಸರಗೂರು ಕನ್ನಡಸಾಹಿತ್ಯ ಪರಿಷತ್ ತಾಲ್ಲೂಕು ಘಟಕದ ಅಧ್ಯಕ್ಷ ಕೆಂಡಗಣ್ಣಸ್ವಾಮಿ, ಕನ್ನಡಪ್ರಮೋದ್, ಚಿಕ್ಕದೇವಮ್ಮ ಬೆಟ್ಟದ ಪಾರುಪತ್ತೇದಾರ ಶಾಂತಿಪುರ ಮಹದೇವಸ್ವಾಮಿ, ಮಾಗುಡಿಲು ಜಗದೀಶ್, ನಂಜಪ್ಪ, ಬಸವರಾಜು, ಆನಂದ ಮೈಲಾರಿ, ಉಮೇಶ್, ಅಭಿ, ರಮೇಶ್, ನವೀನ್, ಶ್ರೀವತ್ಸ, ಶೇಷ, ಆರ್ಯಮಹೇಶ್, ಪೇಂಟ್‌ನಾಗರಾಜು, ಬಿಡುಗಲು ರಾಜು, ಫೈನಾನ್ಸ್ ರವಿ ಕುಮಾರ್, ಸಿ.ಬಸವರಾಜು, ಎಸ್.ಎ.ನಾಗೇಂದ್ರ, ಎಸ್.ಎಸ್.ಬಸವರಾಜು, ಎಸ್.ಎಚ್.ರಮೇಶ್, ಜಯಂತ್, ಮುತ್ತಣ್ಣ, ಸಂತೋಷ್, ರೂಪೇಶ್, ಮಹೇಶ್, ಸೇರಿದಂತೆ ಪಟ್ಟಣ ಪಂಚಾಯಿತಿ ಸದಸ್ಯರು, ಸಮಿತಿ ಸದಸ್ಯರು, ಮುಖಂಡರು ಹಾಜರಿದ್ದರು.
ಶೋಭಾಯಾತ್ರೆ ಮೆರವಣಿಗೆ ವೇಳೆ ಯಾವುದೇ ಅಹಿತಕರ ಘಟನೆ ಜರುಗದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಸರಗೂರು ಪೊಲೀಸರು ಸೂಕ್ತ ಬಂದೋಬಸ್ತ್ ವ್ಯವಸ್ಥೆ ಮಾಡಿದ್ದರು.