ADVERTISEMENT

ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ಕ್ಲೀನ್‌ಚಿಟ್‌ನಿಂದ ಸಂತೋಷ: ಮಹದೇವಪ್ಪ 

​ಪ್ರಜಾವಾಣಿ ವಾರ್ತೆ
Published 21 ಫೆಬ್ರುವರಿ 2025, 0:33 IST
Last Updated 21 ಫೆಬ್ರುವರಿ 2025, 0:33 IST
<div class="paragraphs"><p>ಡಾ.ಎಚ್.ಸಿ. ಮಹದೇವಪ್ಪ&nbsp;</p></div>

ಡಾ.ಎಚ್.ಸಿ. ಮಹದೇವಪ್ಪ 

   

ಮೈಸೂರು: ‘ಮುಡಾ ಪ್ರಕರಣದ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಹೆಸರಿಗೆ ಕಳಂಕ ತರಲು ವಿಪಕ್ಷಗಳು ರಾಜಕೀಯ ಪಿತೂರಿ ನಡೆಸಿದ್ದವು. ಸಿದ್ದರಾಮಯ್ಯಗೆ ಕ್ಲೀನ್‌ಚಿಟ್‌ ಸಿಕ್ಕಿರುವುದು ಸಂತೋಷ ತಂದಿದೆ’ ಎಂದು ಸಮಾಜ ಕಲ್ಯಾಣ ಸಚಿವ ಡಾ.ಎಚ್‌.ಸಿ.ಮಹದೇವಪ್ಪ ಹೇಳಿದರು.

ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಸಿದ್ದರಾಮಯ್ಯ ಮೊದಲಿನಿಂದಲೂ ಗಟ್ಟಿಯಾಗಿದ್ದರು. ಅವರ ಆತ್ಮಸಾಕ್ಷಿ ಎಂದೂ ತಪ್ಪು ಮಾಡಿಲ್ಲವೆಂದು ಹೇಳುತ್ತಿತ್ತು. ನಮಗೂ ಅವರು ತಪ್ಪು ಮಾಡಿಲ್ಲವೆಂದು ಗೊತ್ತಿತ್ತು’ ಎಂದರು.

ADVERTISEMENT

‘ಸಿಎಂ ಬದಲಾವಣೆ ಪ್ರಶ್ನೆಯೇ ಮುಂದಿಲ್ಲ. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಬೇಕೆಂದು ಶಾಸಕರು ಮುದ್ರೆಯೊತ್ತಿದ್ದಾರೆ. ಹೈಕಮಾಂಡ್ ಅದನ್ನು ನಿರ್ದೇಶಿಸಿದೆ. ಅವರ ಸ್ಥಾನದಲ್ಲಿ ಗಟ್ಟಿಯಾಗಿದ್ದಾರೆ’ ಎಂದರು. 

‘ದಲಿತ ಸಮಾವೇಶ ಮಾಡುವುದಾದರೆ ದೊಡ್ಡ ಮಟ್ಟದಲ್ಲಿ ಸಭೆ ಮಾಡಲಿದ್ದೇವೆ’ ಎಂದು ಹೇಳಿದ ಅವರು, ‘ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಹೈಕಮಾಂಡ್‌ ತೀರ್ಮಾನಿಸಲಿದೆ. ಸಚಿವ ರಾಜಣ್ಣ ಹೇಳಿಕೆಗೆ ಪ್ರತಿಕ್ರಿಯಿಸಲಾರೆ’ ಎಂದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.