ಎಚ್‌ಡಿಕೆ, ಸಿದ್ದರಾಮಯ್ಯ
ಮೈಸೂರು: ‘ಜಾತಿ ಗಣತಿ ವರದಿ ಇಟ್ಕೊಂಡು ಪೂಜೆ ಮಾಡುತ್ತಿದ್ದೀರಾ? ಬಿಡುಗಡೆ ಮಾಡದಂತೆ ನಿಮ್ಮನ್ನು ಹಿಡಿದುಕೊಂಡಿರುವವರು ಯಾರು’ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಪ್ರಶ್ನಿಸಿದರು.
ಇಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸಮೀಕ್ಷೆ ನಡೆದು ಹತ್ತು ವರ್ಷಗಳಾಗಿವೆ. ಬಳಿಕ ಸಾಕಷ್ಟು ಬದಲಾವಣೆಗಳಾಗಿವೆ. ವೈಜ್ಞಾನಿಕವಾಗಿ ಮಾಡಬೇಕಾಗಿತ್ತು. ಗಣತಿದಾರರು ನಮ್ಮ ಮನೆಗೇ ಬಂದಿಲ್ಲ ಎಂದು ಕಾಂಗ್ರೆಸ್ ಶಾಸಕರೇ ಹೇಳಿದ್ದಾರೆ. ಹೀಗಿರುವಾಗ, ಆ ವರದಿ ಇಟ್ಟುಕೊಂಡು ಈಗ ಅಲ್ಲಾಡಿಸುತ್ತೀರಾ? ಜಾತಿ– ಜಾತಿಗಳ ನಡುವೆ ಭಿನ್ನಾಭಿಪ್ರಾಯ ಮೂಡಿಸುತ್ತಿದ್ದೀರಾ. ಮಾಧ್ಯಮಕ್ಕೆ ಸೋರಿಕೆಯನ್ನೇಕೆ ಮಾಡುತ್ತಿದ್ದೀರಿ?’ ಎಂದು ಕೇಳಿದರು.
‘ವರದಿಯನ್ನು ಬಿಡುಗಡೆ ಮಾಡಲಿ ಆಗ ಗೊತ್ತಾಗುತ್ತದೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.