ADVERTISEMENT

ಎಚ್.ಡಿ.ಕೋಟೆ: ‘ಎಲ್ಲರೂ ಕನ್ನಡದ ಅಭಿಮಾನ ಬೆಳೆಸಿಕೊಳ್ಳಬೇಕು’

​ಪ್ರಜಾವಾಣಿ ವಾರ್ತೆ
Published 1 ಡಿಸೆಂಬರ್ 2025, 5:59 IST
Last Updated 1 ಡಿಸೆಂಬರ್ 2025, 5:59 IST
ಎಚ್.ಡಿ.ಕೋಟೆ ತಾಲ್ಲೂಕಿನ ಗಡಿಭಾಗ ಪ್ರದೇಶವಾದ ಬಾವಲಿ ಗ್ರಾಮದಲ್ಲಿ ಚೈತನ್ಯ ಭಾರತಿ ಎಜುಕೇಶನಲ್ ಮತ್ತು ಚಾರಿಟೆಬಲ್ ಟ್ರಸ್ಟ್ ವತಿಯಿಂದ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಗಿರಿಜನ ಮುಖಂಡರಾದ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಸೋಮಣ್ಣ ಭಾನುವಾರ ಉದ್ಘಾಟಿಸಿದರು 
ಎಚ್.ಡಿ.ಕೋಟೆ ತಾಲ್ಲೂಕಿನ ಗಡಿಭಾಗ ಪ್ರದೇಶವಾದ ಬಾವಲಿ ಗ್ರಾಮದಲ್ಲಿ ಚೈತನ್ಯ ಭಾರತಿ ಎಜುಕೇಶನಲ್ ಮತ್ತು ಚಾರಿಟೆಬಲ್ ಟ್ರಸ್ಟ್ ವತಿಯಿಂದ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಗಿರಿಜನ ಮುಖಂಡರಾದ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಸೋಮಣ್ಣ ಭಾನುವಾರ ಉದ್ಘಾಟಿಸಿದರು    

ಎಚ್.ಡಿ.ಕೋಟೆ: ಕನ್ನಡ ಭಾಷಾಭಿಮಾನವನ್ನು ಪ್ರತಿಯೊಬ್ಬರೂ ಬೆಳೆಸಿಕೊಂಡಾಗ ಮಾತ್ರ ಕನ್ನಡ ಭಾಷೆ ಉಳಿಯಲು ಸಾಧ್ಯ ಎಂದು ಗಿರಿಜನ ಮುಖಂಡರಾದ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಸೋಮಣ್ಣ ತಿಳಿಸಿದರು.

ತಾಲ್ಲೂಕಿನ ಗಡಿಭಾಗ ಪ್ರದೇಶ ಬಾವಲಿ ಗ್ರಾಮದಲ್ಲಿ ಚೈತನ್ಯ ಭಾರತಿ ಎಜುಕೇಶನಲ್ ಮತ್ತು ಚಾರಿಟೆಬಲ್ ಟ್ರಸ್ಟ್ ವತಿಯಿಂದ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಭಾನುವಾರ ಉದ್ಘಾಟಿಸಿ ಮಾತನಾಡಿದ ಅವರು, ನಾಡು, ನುಡಿಯ ಬಗ್ಗೆ ಇಂದಿನ ಯುವಕರಿಗೆ ಹೆಚ್ಚಿನ ರೀತಿಯಲ್ಲಿ ಅರಿವು ಮೂಡಿಸಬೇಕಾಗಿದೆ. ಗಡಿ ಭಾಗದಲ್ಲಿ ವಾಸಿಸುತ್ತಿರುವ ಗಿರಿಜನರು ಸೇರಿ ಇತರೆ ವರ್ಗದವರಿಗೆ, ಹಕ್ಕು ಪತ್ರ ನಿವೇಶನ ಸೇರಿ ಈ ವಿಷಯವಾಗಿ ಈ ಭಾಗದಲ್ಲಿ ಹಲವು ವರ್ಷಗಳಿಂದ ಹೋರಾಟ ನಡೆಸುತ್ತಾ ಬಂದಿದ್ದಾರೆ. ಸರ್ಕಾರ ಇವರಿಗೆ ಸೌಲಭ್ಯ ಒದಗಿಸಬೇಕು ಎಂದು ಮನವಿ ಮಾಡಿದರು.

ಶಾಸಕ ಅನಿಲ್ ಚಿಕ್ಕಮಾದು ಅವರ ಪತ್ನಿ ಸೌಮ್ಯ ಮಾತನಾಡಿ, ಕನ್ನಡ ಶ್ರೀಮಂತ ಭಾಷೆ ಆಗಿದೆ. ಮಕ್ಕಳಲ್ಲಿ ಕನ್ನಡ ಭಾಷೆಯ ಮಹತ್ವ ತಿಳಿಸಬೇಕಾಗಿದೆ ಎಂದರು.

ADVERTISEMENT

ಕನ್ನಡ ನಾಡಿನಲ್ಲಿ ವಚನಕಾರರು, ದಾಸ ಶ್ರೇಷ್ಠರು, ಜನ್ಮ ತಾಳಿದ ನಾಡಾಗಿದ್ದು, ಈ ನಾಡಿನಲ್ಲಿ ನಾವು ಜನಿಸಿರುವುದು ನಮ್ಮ ಪುಣ್ಯ. ತಾಲ್ಲೂಕು ವನಸಿರಿ ನಾಡಾಗಿದ್ದು, ಇಲ್ಲಿನ ಬೆಟ್ಟಗುಡ್ಡಗಳು ಅರಣ್ಯ ಸಂಪತ್ತು, ಜಲ ಸಂಪತ್ತು, ಒಳಗೊಂಡ ನಮ್ಮ ತಾಲ್ಲೂಕು ವಿಶೇಷತೆಯಿಂದ ಕೂಡಿದೆ ಎಂದರು.

ಕೇರಳ ಗಡಿಭಾಗದ ಸಮೀಪ ಬಾವಲಿ ಗೇಟ್ ಬಳಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಕನ್ನಡ ಪ್ರಮೋದ ಅವರು ಧ್ವಜಾರೋಹಣ ನೆರವೇರಿಸಿ ಮಾತನಾಡಿ, ಗಡಿ ಭಾಗದಲ್ಲಿ ಕನ್ನಡದ ವಾತಾವರಣ ಮೂಡಿಸಿ, ಇಲ್ಲಿನ ಜನರಲ್ಲಿ ನಾಡು, ನುಡಿ, ನೆಲ, ಜಲದ ಬಗ್ಗೆ ಅಭಿಮಾನ ಬೆಳೆಸಬೇಕು. ಇಲ್ಲಿನ ಜನರ ಸಮಸ್ಯೆಗಳನ್ನು ಪರಿಹರಿಸಲು ಸರ್ಕಾರ ಮುಂದಾಗಬೇಕು. ಅದರಲ್ಲೂ ಶಿಕ್ಷಣ, ಆರೋಗ್ಯ ಮತ್ತು ಮೂಲಸೌಲಭ್ಯಗಳನ್ನು ಒದಗಿಸಿದಾಗ ಮಾತ್ರ ಇಲ್ಲಿನ ಜನರು ನೆಮ್ಮದಿಯ ಜೀವನ ನಡೆಸಲು ಸಾಧ್ಯ ಎಂದರು.

ಭುವನೇಶ್ವರಿ ಭಾವಚಿತ್ರದೊಂದಿಗೆ ಶಾಲಾ ಮಕ್ಕಳು ಸುಮಾರು 400 ಅಡಿ ಉದ್ದದ ಕನ್ನಡ ಬಾವುಟದೊಂದಿಗೆ ಮೆರವಣಿಗೆಯಲ್ಲಿ ಸಾಗಿ ವೇದಿಕೆಯಲ್ಲಿ ಸಮಾವೇಶಗೊಂಡರು.

ಬಾವಲಿ ಗಡಿನಾಡ ಸಾಧಕರಾಗಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಪ್ರತಿಭಾ, ಯೋಗಪಟುಗಳಾದ ಸೂರ್ಯ, ಹರ್ಷಿತಾ ಹಾಗೂ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಹಾಗೂ ಅಂಗನವಾಡಿ ಆಶಾ ಕಾರ್ಯಕರ್ತರನ್ನು ಗುರುತಿಸಿ ಅಭಿನಂದಿಸಲಾಯಿತು.

ಡಿ.ಬಿ.ಕುಪ್ಪೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಸುಬ್ರಹ್ಮಣ್ಯ, ಲೇಖಕ ಅಮ್ಮಸಂದ್ರ ಸುರೇಶ್, ಚೈತನ್ಯ ಭಾರತಿ ಎಜುಕೇಶನಲ್ ಚಾರಿಟಬಲ್ ಟ್ರಸ್ಟ್‌ನ ನಂದಿನಿ, ಮಹಿಳಾ ಸಾಂತ್ವನ ಕೇಂದ್ರದ ಆಪ್ತ ಸಮಾಲೋಚಕಿ ಜಯಶೀಲ, ಸ್ಟೇಟ್ ಬ್ಯಾಂಕ್ ವ್ಯವಸ್ಥಾಪಕರಾದ ಪ್ರವೀಣ್ ಗೌಡರ್, ಮುಖಂಡರಾದ ಪ್ರೇಮ್ ಸಾಗರ್, ಪುಟ್ಟಣ್ಣ, ಶಿವಲಿಂಗ, ಮಹೇಶ್, ರವಿ, ಚಂದನ್, ರಾಜ್ ಕುಮಾರ್, ಸವಿತಾ, ಪುಷ್ಪ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.