ಎಚ್.ಡಿ.ಕೋಟೆ: ‘ವಿದ್ಯಾರ್ಥಿಗಳಿಗೆ ಗುರಿ ಮತ್ತು ಆತ್ಮವಿಶ್ವಾಸ ಬಹಳ ಮುಖ್ಯ’ ಎಂದು ಶಿಕ್ಷಣ ಇಲಾಖೆಯ ಸಹಾಯಕ ನಿರ್ದೇಶಕ ಗುಬ್ಬಿಗೂಡು ರಮೇಶ್ ತಿಳಿಸಿದರು.
ತಾಲ್ಲೂಕಿನ ತುಂಬಲೋಗೆ ಗ್ರಾಮದ ಎಂಎಂಕೆ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ ಶನಿವಾರ ನಡೆದ ಅಭಿನಂದನೆ ಹಾಗೂ ಪ್ರತಿಭಾ ಪುರಸ್ಕಾರ ಹಾಗೂ ಸಿಇಟಿ, ನೀಟ್ ತರಬೇತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
‘ವಿದ್ಯಾರ್ಥಿಗಳು ಪಠ್ಯೇತರ ಚಟುವಟಿಕೆಗಳಲ್ಲೂ ಭಾಗವಹಿಸಬೇಕು, ನೈತಿಕ ಪ್ರಜ್ಞೆ, ಆತ್ಮವಿಶ್ವಾಸ ಇದ್ದಾಗ ಸಾಧನೆ ಮಾಡಬಹುದು’ ಎಂದರು.
‘ಸಮಸ್ಯೆ, ಸವಾಲು ಪುರುಷರಿಗಿಂತ ಮಹಿಳೆಯರಿಗೆ ಹೆಚ್ಚಾಗಿರುತ್ತವೆ, ಎಂತಹ ಸನ್ನಿವೇಶದಲ್ಲೂ ಎದೆಗುಂದದೆ ಎದುರಿಸುವ ಸಾಮರ್ಥ್ಯವನ್ನು ಬೆಳೆಸಿಕೊಳ್ಳಬೇಕು. ಅದು ಶಿಕ್ಷಣದಿಂದ ಮಾತ್ರ ಸಾಧ್ಯ’ ಎಂದರು.
ಸರ್ಕಾರಿ ಪದವಿಪೂರ್ವ ಕಾಲೇಜು ಪ್ರಾಂಶುಪಾಲ ರಾಮೇಗೌಡ ಮಾತನಾಡಿ, ಸಿಇಟಿ, ನೀಟ್ ಮತ್ತು ಜೆಇಇ ಪರೀಕ್ಷೆ ಎದುರಿಸುವ ಸಾಮರ್ಥ್ಯವನ್ನು ಹೇಗೆ ಬೆಳೆಸಿಕೊಳ್ಳಬೇಕು ಎಂಬುದನ್ನು ತಿಳಿಸಿದರು.
‘ವಿದ್ಯಾರ್ಥಿಗಳ ಯಶಸ್ಸಿಗೆ ಪೋಷಕರ ಜವಾಬ್ದಾರಿಯು ಬಹಳ ಮುಖ್ಯ, ಕಠಿಣ ಪರಿಶ್ರಮ ಇದ್ದರೆ ಯಾವುದೂ ಅಸಾಧ್ಯವಲ್ಲ’ ಎಂದು ಹೇಳಿದರು.
ಸಂಸ್ಥೆಯ ಅಧ್ಯಕ್ಷರಾದ ಕೆ.ಆರ್. ಸತೀಶ್, ಸಿಡಿಸಿ ಅಧ್ಯಕ್ಷ ಮೋಹನ್, ಸಕಲೇಶ್, ವೈದ್ಯನಾಥ್, ಅಶೋಕ್, ಶ್ರೀಧರ್, ವೈದ್ಯನಾಥ್, ಕೃಷ್ಣೆಗೌಡ, ತುಂಬಸೋಗೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲಕ್ಷ್ಮಿಶಿವರಾಜು, ಕೆನರಾ ಬ್ಯಾಂಕ್ ವ್ಯವಸ್ಥಾಪಕ ಆನಂದ, ಕೆಡಿಸಿ ಉಪನ್ಯಾಸಕ ವಿರೂಪಾಕ್ಷ, ಮೋಹನ್, ಸಿದ್ದರಾಜು, ಸಿದ್ಧಾರ್ಥ, ಪ್ರಸನ್ನ, ಮನೋಜ್, ಮಹದೇವಿ, ತನುಜ, ಜಾನ್, ಸುಪ್ರಿಯಾ, ಮುಸ್ಕಾನ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.