ಎಚ್.ಡಿ ಕುಮಾರಸ್ವಾಮಿ
ಮೈಸೂರು: ‘ಕಾಂಗ್ರೆಸ್ ಸರ್ಕಾರವು ದ್ವೇಷ ಭಾಷಣ ನಿಷೇಧ ಮಸೂದೆ ಮೂಲಕ ಪ್ರತಿಪಕ್ಷಗಳನ್ನು ಹತ್ತಿಕ್ಕುವ ಕೆಲಸಕ್ಕೆ ಮುಂದಾಗಿದೆ. ಇದಕ್ಕೆ ವಿರೋಧ ಪಕ್ಷಗಳು ಹೆದರುವುದಿಲ್ಲ. ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಕಾಂಗ್ರೆಸ್ ಕಾರ್ಯಕರ್ತರು ಏನೇನು ಮಾತನಾಡಿದ್ದಾರೆ, ಅವರ ಮೇಲೆ ಯಾವ ರೀತಿ ಕ್ರಮ ತೆಗೆದುಕೊಳ್ಳುತ್ತಾರೆ ನೋಡೋಣ’ ಎಂದು ಬೃಹತ್ ಕೈಗಾರಿಕೆ ಸಚಿವ ಎಚ್.ಡಿ. ಕುಮಾರಸ್ವಾಮಿ ಹೇಳಿದರು.
ಇಲ್ಲಿ ಮಂಗಳವಾರ ಪತ್ರಕರ್ತರ ಜೊತೆ ಮಾತನಾಡಿದ ಅವರು ‘ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ 2800 ರೈತರು ಅತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಡೀ ಆಡಳಿತ ವೈಫಲ್ಯ ಹಾಗೂ ಭ್ರಷ್ಟಾಚಾರದಿಂದ ಕೂಡಿದೆ’ ಎಂದು ಟೀಕಿಸಿದರು.
‘ ಸರ್ಕಾರ ಈ ವರ್ಷ ಕೃಷಿ ಚಟುವಟಿಕೆಗೆ 32 ಲಕ್ಷ ರೈತರಿಗೆ ₹24 ಸಾವಿರ ಕೋಟಿ ಹಣ ನೀಡುತ್ತೇವೆ ಎಂದು ಹೇಳಿತ್ತು. ಆದರೆ ನವೆಂಬರ್‌ವರೆಗೆ ಕೇವಲ ₹12 ಸಾವಿರ ಕೋಟಿ ಕೊಟ್ಟಿದೆ. ರೈತರನ್ನು ಆತ್ಮಹತ್ಯೆಯ ಪರಿಸ್ಥಿತಿಗೆ ತಂದು ನಿಲ್ಲಿಸಿದೆ’ ಎಂದು ದೂರಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.