ಎಚ್.ಡಿ. ರೇವಣ್ಣ
ಮೈಸೂರು: ‘ಜೆಡಿಎಸ್ ಮುಖಂಡರ ಅಸಮಾಧಾನವನ್ನು ವರಿಷ್ಠರಾದ ಎಚ್.ಡಿ.ದೇವೇಗೌಡ, ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರೇ ಸರಿಪಡಿಸಬೇಕು’ ಎಂದು ಶಾಸಕ ಎಚ್.ಡಿ.ರೇವಣ್ಣ ಗುರುವಾರ ಹೇಳಿದರು.
ಚಾಮುಂಡಿ ಬೆಟ್ಟದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ‘ಯಾವ ಪಕ್ಷದಲ್ಲಿ ತಾನೇ ಅಸಮಾಧಾನ ಇಲ್ಲ’ ಎಂದು ಪ್ರಶ್ನಿಸಿದರು.
‘ನಿಖಿಲ್ ಕುಮಾರಸ್ವಾಮಿ ರಾಜ್ಯ ಪ್ರವಾಸ ಮಾಡುತ್ತಿರುವುದು ಸಂತೋಷದ ಸಂಗತಿ, ಯುವಕರೆಲ್ಲರೂ ಹೋರಾಟ ಮಾಡಬೇಕು. ಪಕ್ಷ ಸಂಘಟಿಸಬೇಕು’ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.