
ಪ್ರಜಾವಾಣಿ ವಾರ್ತೆ
ಮೈಸೂರು: ‘ಪ್ರತಿಯೊಬ್ಬರೂ ದುಶ್ಚಟದಿಂದ ದೂರವಿದ್ದು, ಆರೋಗ್ಯ ಕಾಪಾಡಿಕೊಳ್ಳಬೇಕು’ ಎಂದು ಶರಣು ವಿಶ್ವವಚನ ಫೌಂಡೇಷನ್ ಸಂಸ್ಥಾಪಕ ವಚನ ಕುಮಾರಸ್ವಾಮಿ ಹೇಳಿದರು.
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ವತಿಯಿಂದ ನಗರದ ಬೋಗಾದಿ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮದಲ್ಲಿ ಮಾತನಾಡಿದರು.
ಶರಣರ ವಚನಗಳು ಕೇವಲ ಧಾರ್ಮಿಕ ಪಠ್ಯಗಳಲ್ಲ; ಅವು ಜೀವನ ವಿಜ್ಞಾನ, ಆರೋಗ್ಯ ಶಾಸ್ತ್ರ ಮತ್ತು ನೈತಿಕ ಬದುಕಿನ ಮಾರ್ಗಸೂಚಿಗಳಾಗಿವೆ ಎಂದರು.
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೇಲ್ವಿಚಾರಕ ಶಶಿಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಿಕ್ಷಕರಾದ ಚಂದ್ರಶೇಖರರಾಧ್ಯ, ದೀಪಿಕಾ, ವಿಜಯಲಕ್ಷ್ಮಿ, ಜಾನವಿ, ಭಾರತಿ, ದಿನೇಶ್ ಕುಮಾರ್, ನಿರ್ಮಲ ಇದ್ದರು.