ADVERTISEMENT

ಮೈಸೂರಿನಲ್ಲಿ ಭಾರಿ ಮಳೆ; ಚಾಮುಂಡಿಬೆಟ್ಟದಲ್ಲಿ ಭೂಕುಸಿತ

​ಪ್ರಜಾವಾಣಿ ವಾರ್ತೆ
Published 21 ಅಕ್ಟೋಬರ್ 2021, 6:23 IST
Last Updated 21 ಅಕ್ಟೋಬರ್ 2021, 6:23 IST
ಮೈಸೂರಿನಲ್ಲಿ ಬುಧವಾರ ರಾತ್ರಿ ಸುರಿದ ಭಾರಿ ಮಳೆಗೆ ಚಾಮುಂಡಿಬೆಟ್ಟದಲ್ಲಿ ನಂದಿ ವಿಗ್ರಹಕ್ಕೆ ಹೋಗುವ ರಸ್ತೆಯಲ್ಲಿ ಭೂಕುಸಿತ ಉಂಟಾಗಿದೆ.
ಮೈಸೂರಿನಲ್ಲಿ ಬುಧವಾರ ರಾತ್ರಿ ಸುರಿದ ಭಾರಿ ಮಳೆಗೆ ಚಾಮುಂಡಿಬೆಟ್ಟದಲ್ಲಿ ನಂದಿ ವಿಗ್ರಹಕ್ಕೆ ಹೋಗುವ ರಸ್ತೆಯಲ್ಲಿ ಭೂಕುಸಿತ ಉಂಟಾಗಿದೆ.   

ಮೈಸೂರು: ನಗರದಲ್ಲಿ ಬುಧವಾರ ರಾತ್ರಿ ಇಡೀ ಸುರಿದ ಭಾರಿ ಮಳೆಗೆ ಚಾಮುಂಡಿಬೆಟ್ಟದಲ್ಲಿ ಭೂ ಕುಸಿತ ಉಂಟಾಗಿದೆ. ಹಳೆಯ ಜಿಲ್ಲಾಧಿಕಾರಿ ಕಚೇರಿ ಸಮೀಪ ಮೂರು ಮರಗಳು ಧರೆಗುರುಳಿವೆ.‌

ನಗರದ ಗಂಗೋತ್ರಿ ಬಡಾವಣೆ, ಜನತಾ ನಗರ, ಮಧುವನ ಸೇರಿದಂತೆ ಅನೇಕ ಕಡೆ ತಗ್ಗು ಪ್ರದೇಶಗಳಲ್ಲಿ ನೀರು ನುಗ್ಗಿದೆ. ಸಿದ್ಧಲಿಂಗಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ಬೆಲವತ್ತ ಗ್ರಾಮದಲ್ಲಿ ಸುಮಾರು 30 ಮನೆಗಳಿಗೆ ನೀರು ನುಗ್ಗಿದೆ‌.

ಬುಧವಾರ ರಾತ್ರಿಯಿಂದ ಗುರುವಾರ ನಸುಕಿನವರೆಗೂ 10 ಸೆಂ.ಮೀನಷ್ಟು ಮಳೆ ಸುರಿದಿದ್ದು, ಗುರುವಾರವೂ ಭಾರಿ ಮಳೆಯಾಗುವ ನಿರೀಕ್ಷೆ ಇದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮೂಲಗಳು ತಿಳಿಸಿವೆ.

ADVERTISEMENT

ಭೂಕುಸಿತದ ದುರಸ್ಥಿ ಕಾರ್ಯವನ್ನು ತ್ವರಿತವಾಗಿ ನಡೆಸಬೇಕು ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಅವರಿಗೆ ಸೂಚನೆ ನೀಡಿದ್ದಾರೆ.

ಕುಸಿದಿರುವ ರಸ್ತೆಯಲ್ಲಿ ಸಂಚಾರವನ್ನು ಸಂಪೂರ್ಣ ಬಂದ್ ಮಾಡಬೇಕು ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.