ಮೈಸೂರು: ನಗರದಲ್ಲಿ ಬುಧವಾರ ಬೆಳಿಗ್ಗೆ ಮಳೆ ಆರಂಭವಾಗಿದೆ. ಹಲವು ಬಡಾವಣೆಗಳಲ್ಲಿ ಬಿರುಸಿನಿಂದ ಸುರಿಯುತ್ತಿದೆ.
ಕಬಿನಿ ಜಲಾಶಯಕ್ಕೆ ಹರಿದು ಬರುತ್ತಿರುವ ನೀರಿನ ಪ್ರಮಾಣದಲ್ಲಿ ಏರಿಕೆ ಉಂಟಾಗಿದೆ.
ಸದ್ಯ, ಒಳ ಹರಿವಿನ ಪ್ರಮಾಣ 7,197 ಕ್ಯುಸೆಕ್ ಇದ್ದು, 700 ಕ್ಯುಸೆಕ್ ನಷ್ಟು ನೀರನ್ನು ಹೊರ ಬಿಡಲಾಗುತ್ತಿದೆ. 2,284 ಗರಿಷ್ಠ ಅಡಿಯ ಜಲಾಶಯದಲ್ಲಿ 2,266.83 ಅಡಿಯಷ್ಟು ನೀರಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.