ಮೈಸೂರು: ಇಲ್ಲಿನ ವಿಮಾನ ನಿಲ್ದಾಣದಲ್ಲಿ ಇಳಿಯಬೇಕಿದ್ದ ಬೆಳಗಾವಿಯಿಂದ ಬಂದ ಟ್ರೂಜೆಟ್ ವಿಮಾನವು, ಸೋಮವಾರ ಸಂಜೆ ಮಳೆಯಿಂದಾಗಿ ಚೆನ್ನೈ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗಿದೆ.
ಈ ಕುರಿತು ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ವಿಮಾನ ನಿಲ್ದಾಣದ ನಿರ್ದೇಶಕ ಮಂಜುನಾಥ್, ‘ಮಳೆ ವಿಪರೀತ ಇದ್ದಾಗ ಲ್ಯಾಂಡ್ ಆಗುವುದು ಕಷ್ಟ. ಹೀಗಾಗಿ, ವಿಮಾನವು ಇಲ್ಲಿ ಇಳಿದಿಲ್ಲ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.