ಕೊಡಗಿನಲ್ಲಿ ಮಳೆ ಸುರಿಯುತ್ತಿರುವ ದೃಶ್ಯ
ಮೈಸೂರು: ಜಿಲ್ಲೆಯ ವಿವಿಧೆಡೆ, ಹಾಸನ ಹಾಗೂ ಕೊಡಗು ಜಿಲ್ಲೆಯ ಹಲವೆಡೆ ಸೋಮವಾರ ಸಂಜೆ ಗುಡುಗು ಸಹಿತ ಸಾಧಾರಣ ಮಳೆ ಬಿದ್ದಿತು.
ಜಿಲ್ಲೆಯ ಸಾಲಿಗ್ರಾಮ, ತಿ.ನರಸೀಪುರ, ಹುಣಸೂರು, ಜಯಪುರ, ಪಿರಿಯಾಪಟ್ಟಣ ತಾಲ್ಲೂಕಿನ ಬೆಟ್ಟದಪುರದಲ್ಲಿ ಮಳೆ ಸುರಿಯಿತು.
ಹಾಸನ ನಗರ, ಹೊಳೆನರಸೀಪುರ, ಅರಕಲಗೂಡು ಭಾಗದಲ್ಲಿ ಮಳೆಯಾಯಿತು. ಹೊಳೆನರಸೀಪುರದ ಕಿಕ್ಕೇರಮ್ಮನ ಕೊತ್ತಲಿನ ಬಡಾವಣೆಯ ಮನೆಯೊಂದರ ಚಾವಣಿ ಹಾರಿ ಹೋಗಿದೆ. ಹಾಸನ–ಮೈಸೂರು ರಾಷ್ಟ್ರೀಯ ಹೆದ್ದಾರಿ ಪಕ್ಕದ ಚಾಮುಂಡೇಶ್ವರಿ ವಿದ್ಯುತ್ ನಿಗಮದ ಆವರಣದ ಮರ ವಿದ್ಯುತ್ ತಂತಿಯ ಮೇಲೆ ಬಿದ್ದು, 3 ಗಂಟೆ ವಿದ್ಯುತ್ ಸಂಪರ್ಕ ಕಡಿತಗೊಂಡಿತ್ತು.
ಕೊಡಗು ಜಿಲ್ಲೆಯ ಹಲವೆಡೆ ಮಳೆ ಸುರಿಯಿತು. ನಾಪೋಕ್ಲು ಹೋಬಳಿ ವ್ಯಾಪ್ತಿಯ ಹಲವೆಡೆ ಬಿರುಸಾಗಿತ್ತು. ಸಮೀಪದ ಮರಂದೋಡ ಗ್ರಾಮದಲ್ಲಿ ಭಾರಿ ಮಳೆಯಾಯಿತು. ವಿದ್ಯುತ್ ಕಂಬಗಳ ಮೇಲೆ ಮರಗಳು ಮುರಿದು ಬಿದ್ದಿರುವುದರಿಂದ ವಿದ್ಯುತ್ ಸಂಪರ್ಕ ಕಡಿತಗೊಂಡಿತ್ತು. ಸುಂಟಿಕೊಪ್ಪದಲ್ಲಿ ಗುಡುಗು, ಸಿಡಿಲು ಸಹಿತ ಜೋರು ಮಳೆಯಾಯಿತು. ಕುಶಾಲನಗರ, ಮಡಿಕೇರಿ, ಗೋಣಿಕೊಪ್ಪಲು, ಪೊನ್ನಂಪೇಟೆ ಸುತ್ತಮುತ್ತ ಸಾಧಾರಣ ಮಳೆ ಸುರಿಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.