ADVERTISEMENT

ಭಾರಿ ಮಳೆ: ಮೈಸೂರು ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಣೆ

​ಪ್ರಜಾವಾಣಿ ವಾರ್ತೆ
Published 19 ಮೇ 2022, 4:00 IST
Last Updated 19 ಮೇ 2022, 4:00 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಮೈಸೂರು: ಜಿಲ್ಲೆಯಲ್ಲಿ ಎಡೆಬಿಡದೇ ಮಳೆ ಸುರಿಯುತ್ತಿದ್ದು, ಗುರುವಾರ ಜಿಲ್ಲೆಯ ಎಲ್ಲಾ ಶಾಲೆಗಳಿಗೆ ಒಂದು ದಿನದ ರಜೆ ಘೋಷಿಸಲಾಗಿದೆ.

ಜಿಲ್ಲೆಯ ಎಚ್.ಡಿ.ಕೋಟೆ ಹಾಗೂ ಸರಗೂರು ತಾಲ್ಲೂಕಿನಲ್ಲಿ ಭಾರಿ ಮಳೆ ಸುರಿಯುತ್ತಿದೆ. ಎಲ್ಲ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಿಸಿ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಚಂದ್ರಕಾಂತ ಆದೇಶ ಹೊರಡಿಸಿದ್ದಾರೆ.

ಈ ಎರಡೂ ತಾಲ್ಲೂಕುಗಳಲ್ಲಿಯೂ ಎಡೆಬಿಡದೇ ಮಳೆ ಸುರಿಯುತ್ತಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.