ADVERTISEMENT

ದಸರಾ ಪಾರಂಪರಿಕ‌ ಸೈಕಲ್ ಸವಾರಿಗೆ ಎಸ್.ಟಿ.ಸೋಮಶೇಖರ್ ಚಾಲನೆ

​ಪ್ರಜಾವಾಣಿ ವಾರ್ತೆ
Published 29 ಸೆಪ್ಟೆಂಬರ್ 2022, 4:21 IST
Last Updated 29 ಸೆಪ್ಟೆಂಬರ್ 2022, 4:21 IST
   

ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಯುಕ್ತ ನಗರದ ಪುರಭವನದ ಎದುರು ಪುರಾತತ್ವ,ಸಂಗ್ರಹಾಲಯ ಮತ್ತು ಪರಂಪರೆ ಇಲಾಖೆ ಆಯೋಜಿಸಿದ್ದ "ಪಾರಂಪರಿಕ ಸೈಕಲ್ ಸವಾರಿ(ಟ್ರಿನ್-ಟ್ರಿನ್) ಕಾರ್ಯಕ್ರಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಚಾಲನೆ ನೀಡಿದರು. ಅವರೂ ಸೈಕಲ್‌ ಸವಾರಿ ಮಾಡಿದ್ದು‌ ವಿಶೇಷವಾಗಿತ್ತು.

ಬಳಿಕ ಮಾತನಾಡಿದ ಅವರು,ನಾಡಹಬ್ಬ ದಸರಾ ಅಂಗವಾಗಿ ಪುರಾತತ್ವ, ಸಂಗ್ರಹಾಲಯ ಮತ್ತು ಪರಂಪರೆ ಇಲಾಖೆಯು ನಗರದ ಪಾರಂಪರಿಕ ಕಟ್ಟಡಗಳ ವೀಕ್ಷಣೆಗಾಗಿ ಸೈಕಲ್ ಸವಾರಿಯನ್ನು ಏರ್ಪಡಿಸಿದೆ. ಯುವಕರು, ಹಿರಿಯರು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದಾರೆ. ಸೈಕಲ್ ಸವಾರಿಗೆ ಸೂಕ್ತ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು.

ಸೈಕಲ್ ಸವಾರಿಯಲ್ಲಿ 60 ವರ್ಷದ ಒಳಗಿನ ಸಾರ್ವಜನಿಕರು ಹಾಗೂ15 ವರ್ಷ ಮೇಲ್ಪಟ್ಟ ಶಾಲಾ-ಕಾಲೇಜು ವಿದ್ಯಾರ್ಥಿಗಳು ಮೈಸೂರು, ಮಂಡ್ಯ, ಕೊಡಗು,ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಿಂದ ಸುಮಾರು ನೂರಕ್ಕೂ ಹೆಚ್ಚು ಮಂದಿ ಭಾಗವಹಿಸಿದ್ದರು.
ಶಾಸಕ ಎಲ್.ನಾಗೇಂದ್ರ ಸೇರಿದಂತೆ ಪುರಾತತ್ವ, ಸಂಗ್ರಹಾಲಯ ಮತ್ತು ಪರಂಪರೆ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.