ADVERTISEMENT

ಅರೆಕಾಲಿಕ ಕಾನೂನು ಸ್ವಯಂ ಸೇವಕರ ನೇಮಕ: ಅರ್ಜಿ ಆಹ್ವಾನ

​ಪ್ರಜಾವಾಣಿ ವಾರ್ತೆ
Published 21 ಆಗಸ್ಟ್ 2020, 7:11 IST
Last Updated 21 ಆಗಸ್ಟ್ 2020, 7:11 IST

ಮೈಸೂರು: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಲ್ಲಿ ಅರೆಕಾಲಿಕ ಕಾನೂನು ಸ್ವಯಂ ಸೇವಕರನ್ನು ನೇಮಕ ಮಾಡಿಕೊಳ್ಳಲಾಗುವುದು ಎಂದು ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಬಿ.ಪಿ.ದೇವಮಾನೆ ತಿಳಿಸಿದ್ದಾರೆ.

ಅರೆಕಾಲಿಕ ಕಾನೂನು ಸ್ವಯಂ ಸೇವಕರು ನೊಂದ ಮತ್ತು ಕಾನೂನು ನೆರವು ಅಗತ್ಯವಿರುವ ವ್ಯಕ್ತಿಗಳನ್ನು ಗುರುತಿಸಿ, ನ್ಯಾಯಾಲಯಗಳಲ್ಲಿ ಮತ್ತು ಸರ್ಕಾರಿ ಕಚೇರಿಗಳಲ್ಲಿ ಸೂಕ್ತ ಮಾರ್ಗದರ್ಶನ ನೀಡುವ ಕರ್ತವ್ಯ ನಿರ್ವಹಿಸಬೇಕಾಗಿರುತ್ತದೆ.

ಇಚ್ಛೆ ಇರುವ ಅಭ್ಯರ್ಥಿಗಳು ಕನಿಷ್ಠ ಎಸ್ಸೆಸ್ಸೆಲ್ಸಿ ಉತ್ತಿರ್ಣರಾಗಿರಬೇಕು. ಸಮಾಜ ಸೇವೆಯ ಅನುಭವದ ಜೊತೆಗೆ ಸೇವಾ ಮನೋಭಾವ ಹೊಂದಿರುವವರು ತಮ್ಮ ವೈಯಕ್ತಿಕ ವಿವರ, ವಿದ್ಯಾರ್ಹತೆ, ಆಧಾರ್ ಕಾರ್ಡ್ ಮತ್ತು ಈಚಿನ ಭಾವಚಿತ್ರ ಒಳಗೊಂಡ ಭರ್ತಿ ಮಾಡಿದ ಅರ್ಜಿಗಳನ್ನು ಅಂಚೆ ಮುಖಾಂತರ ಅಥವಾ ಸ್ಕ್ಯಾನ್ ಮಾಡಿ ಇ-ಮೇಲ್ ಮೂಲಕ ಆ.24ರೊಳಗಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಕ್ಕೆ ಸಲ್ಲಿಸಬಹುದು.

ADVERTISEMENT

ಅರೆಕಾಲಿಕ ಕಾನೂನು ಸ್ವಯಂ ಸೇವಕರಿಗೆ ಯಾವುದೇ ನಿಯಮಿತ ಸಂಬಳ ಅಥವಾ ಭತ್ಯೆ ನೀಡಲಾಗುವುದಿಲ್ಲ. ಸೇವೆ ಸಲ್ಲಿಸಿದ ದಿನವೊಂದಕ್ಕೆ ಗೌರವ ಧನವಾಗಿ ₹ 500 ನೀಡಲಾಗುವುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.