ADVERTISEMENT

 ಹುಲ್ಲಹಳ್ಳಿ | ಪಟ್ಟಲದಮ್ಮನ  ಜಾತ್ರಾ ಮಹೋತ್ಸವ

​ಪ್ರಜಾವಾಣಿ ವಾರ್ತೆ
Published 8 ಫೆಬ್ರುವರಿ 2026, 3:02 IST
Last Updated 8 ಫೆಬ್ರುವರಿ 2026, 3:02 IST
ಪಟ್ಟಲದಮ್ಮನಿಗೆ ವಿಶೇಷ ಪೂಜೆ
ಪಟ್ಟಲದಮ್ಮನಿಗೆ ವಿಶೇಷ ಪೂಜೆ   

ಹುಲ್ಲಹಳ್ಳಿ (ನಂಜನಗೂಡು): ತಾಲ್ಲೂಕಿನ ಕಾರ್ಯ ಗ್ರಾಮದಲ್ಲಿ ಶನಿವಾರ ಪಟ್ಟಲದಮ್ಮನ ಜಾತ್ರಾ ಮಹೋತ್ಸವ ಹಾಗೂ ಕೊಂಡೋತ್ಸವ ವಿಜ್ರಂಭಣೆಯಿಂದ ನೆರವೇರಿತು.

ಬೆಳಿಗ್ಗೆ ಪಟ್ಟಲದಮ್ಮನ ಉತ್ಸವಮೂರ್ತಿಯನ್ನು ವಿವಿಧ ಹೂಗಳಿಂದ ಅಲಂಕರಿಸಿ ಮಹಿಳೆಯರು ಮತ್ತು ಮಕ್ಕಳು ಕನಕನ್ನಡಿಯನ್ನು ಹೊತ್ತು ಊರಿನ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಲಾಯಿತು.

ಮಹಿಳೆಯರು ರಥ ಬೀದಿಯನ್ನು ವಿವಿಧ ಬಣ್ಣದ ರಂಗೋಲಿಗಳಿಂದ ಅಲಂಕರಿಸಿ ದೇವಿಯನ್ನು ಸ್ವಾಗತಿಸಿದರು.

ADVERTISEMENT

ದೇವಿಗೆ ಬೆಳಗಿನ ಜಾವದಿಂದಲೇ ವಿಶೇಷ ಪೂಜೆ, ಹೋಮ ಹವನ ನಡೆಸಲಾಯಿತು. ಗ್ರಾಮವನ್ನು ವಿದ್ಯುತ್ ದೀಪ ಅಲಂಕಾರಗಳಿಂದ ಮಾಡಲಾಗಿತ್ತು. ಜಾತ್ರೆಯಲ್ಲಿ ಸಾವಿರಾರು ಮಂದಿ ಭಕ್ತರು ಕೊಂಡೋತ್ಸವವನ್ನು ಕಣ್ತುಂಬಿಕೊಂಡರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.