ADVERTISEMENT

‘ಮಾನವ ಕಳ್ಳ ಸಾಗಾಣಿಕೆ ತಡೆ ಅಗತ್ಯ’

ಪೊಲೀಸ್ ಅಧಿಕಾರಿಗಳಿಗೆ ಆಯೋಜಿಸಿದ್ದ ವಿಶೇಷ ಕಾರ್ಯಾಗಾರ

​ಪ್ರಜಾವಾಣಿ ವಾರ್ತೆ
Published 11 ಜುಲೈ 2025, 7:09 IST
Last Updated 11 ಜುಲೈ 2025, 7:09 IST
ಮೈಸೂರಿನ ಕರ್ನಾಟಕ ಪೊಲೀಸ್ ಅಕಾಡೆಮಿ ಹಾಗೂ ವಿಹಾನ್ ಸಂಸ್ಥೆ ಬೆಂಗಳೂರು ಅಕಾಡೆಮಿ ಆವರಣದಲ್ಲಿ ‘ಮಾನವ ಕಳ್ಳಸಾಗಾಣೆ ವಿರೋಧಿ ಹಾಗೂ ನಿರ್ಮೂಲನೆಯಲ್ಲಿ ಪೋಲೀಸರ ಪಾತ್ರ’ ವಿಷಯದ ಕುರಿತು ಕರ್ತವ್ಯ ನಿರತ ಪೊಲೀಸ್ ಅಧಿಕಾರಿಗಳಿಗೆ ಆಯೋಜಿಸಿರುವ ವಿಶೇಷ ಕಾರ್ಯಾಗಾರದಲ್ಲಿ ಎಸ್‌.ಎಲ್‌.ಚನ್ನಬಸವಣ್ಣ ಮಾತನಾಡಿದರು
ಮೈಸೂರಿನ ಕರ್ನಾಟಕ ಪೊಲೀಸ್ ಅಕಾಡೆಮಿ ಹಾಗೂ ವಿಹಾನ್ ಸಂಸ್ಥೆ ಬೆಂಗಳೂರು ಅಕಾಡೆಮಿ ಆವರಣದಲ್ಲಿ ‘ಮಾನವ ಕಳ್ಳಸಾಗಾಣೆ ವಿರೋಧಿ ಹಾಗೂ ನಿರ್ಮೂಲನೆಯಲ್ಲಿ ಪೋಲೀಸರ ಪಾತ್ರ’ ವಿಷಯದ ಕುರಿತು ಕರ್ತವ್ಯ ನಿರತ ಪೊಲೀಸ್ ಅಧಿಕಾರಿಗಳಿಗೆ ಆಯೋಜಿಸಿರುವ ವಿಶೇಷ ಕಾರ್ಯಾಗಾರದಲ್ಲಿ ಎಸ್‌.ಎಲ್‌.ಚನ್ನಬಸವಣ್ಣ ಮಾತನಾಡಿದರು   

ಮೈಸೂರು: ‘ಮಾನವ ಕಳ್ಳ ಸಾಗಾಣಿಕೆಗೆ ದುರ್ಬಲ ವರ್ಗಗಳು ಗುರಿಯಾಗುತ್ತಿದ್ದು, ಇದನ್ನು ತಡೆಯುವುದು ಪೊಲೀಸರ ಕರ್ತವ್ಯ’ ಎಂದು ಪೊಲೀಸ್‌ ಅಕಾಡೆಮಿ ನಿರ್ದೇಶಕ ಎಸ್‌.ಎಲ್‌.ಚನ್ನಬಸವಣ್ಣ ತಿಳಿಸಿದರು.

ಕರ್ನಾಟಕ ಪೊಲೀಸ್ ಅಕಾಡೆಮಿ ಹಾಗೂ ವಿಹಾನ್ ಸಂಸ್ಥೆ ಬೆಂಗಳೂರು ಅಕಾಡೆಮಿ ಆವರಣದಲ್ಲಿ ‘ಮಾನವ ಕಳ್ಳಸಾಗಾಣೆ ವಿರೋಧಿ ಹಾಗೂ ನಿರ್ಮೂಲನೆಯಲ್ಲಿ ಪೋಲೀಸರ ಪಾತ್ರ’ ವಿಷಯದ ಕುರಿತು ಕರ್ತವ್ಯ ನಿರತ ಪೊಲೀಸ್ ಅಧಿಕಾರಿಗಳಿಗೆ ಆಯೋಜಿಸಿರುವ ವಿಶೇಷ ಕಾರ್ಯಾಗಾರದಲ್ಲಿ ಮಾತನಾಡಿದರು.

‘ಮಾನವ ಕಳ್ಳಸಾಗಾಣಿಕೆ ವಿಷಯವು ಗಂಭೀರವಾದ ಸಂಕೀರ್ಣ ಜಾಗತಿಕ ಸಮಸ್ಯೆಯಾಗಿ ಬೆಳೆದಿದೆ. ಬದಲಾದ ಸಾಮಾಜಿಕ ಮತ್ತು ಆರ್ಥಿಕ ವ್ಯವಸ್ಥೆಯಲ್ಲಿ ಇದು ತನ್ನ ವ್ಯಾಪ್ತಿಯನ್ನು ವ್ಯಾಪಕವಾಗಿ ವಿಸ್ತರಿಸಿದೆ. ಇದನ್ನು ತಡೆಯಲು ಹಲವು ಕಾನೂನುಗಳಿದ್ದು, ಪೊಲೀಸ್ ವ್ಯವಸ್ಥೆ, ಸರ್ಕಾರದ ಸಂಸ್ಥೆಗಳು ಹಾಗೂ ಇತರೆ ಸಂಘ-ಸಂಸ್ಥೆಗಳು ಪರಿಣಾಮಕಾರಿಯಾಗಿ ಶ್ರಮಿಸುತ್ತಿದ್ದರೂ, ಹೊಸ ಮಾರ್ಗಗಳು ಹಾಗೂ ತಂತ್ರಜ್ಞಾನದ ಮೂಲಕ ಮಾನವ ಕಳ್ಳಸಾಗಾಣಿಕೆ ಚಟುವಟಿಕೆಯಲ್ಲಿ ಪಾತಕಿಗಳು ತೊಡಗುತ್ತಿದ್ದು ವ್ಯವಸ್ಥೆಗೆ ಸವಾಲಾಗಿ ಪರಿಣಮಿಸಿದೆ’ ಎಂದರು.

ADVERTISEMENT

‘ಪೊಲೀಸ್ ಅಧಿಕಾರಿಗಳು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಸರ್ಕಾರಿ ಸಂಘ ಸಂಸ್ಥೆಗಳು ಹಾಗೂ ಸರ್ಕಾರೇತರ ವಿವಿಧ ಸಂಘ ಸಂಸ್ಥೆಗಳೊಡನೆ ಸಮನ್ವಯತೆ ಸಾಧಿಸಿ ಮಾನವ ಕಳ್ಳಸಾಗಾಣಿಕೆ ತಡೆಯವಲ್ಲಿ ಶ್ರಮಿಸಬೇಕು’ ಎಂದರು.

ಕಾರ್ಯಾಗಾರದ ಸಂಯೋಜಕ ಎಸ್‌. ವೆಂಕಟೇಶ್, ವಿಹಾನ್ ಸಂಸ್ಥೆಯ ರೋವಿನ ಬಾಸ್ಟಿನ್, ಅಂಬರೀಷ್ ಜೈರಾಜ್ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.